ಬ್ರೇಕಿಂಗ್ ನ್ಯೂಸ್
02-05-23 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲಾ, ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದು ಪ್ರಖರ ಹಿಂದುತ್ವ ಪರ ಇರುವ ಬಜರಂಗದಳ ನಿಷೇಧಿಸುವ ಅಂಶ ಪ್ರಣಾಳಿಕೆಗೆ ಸೇರಿಸಲಾಗಿದೆ.
'ಸರ್ವ ಜನಾಂಗದ ಶಾಂತಿಯ ತೋಟ,ಇದುವೆ ಕಾಂಗ್ರೆಸ್ ಬದ್ಧತೆ' ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಪ್ರಮುಖ ಯೋಜನೆಗಳು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ, ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ, ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ, ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ, ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ, ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ, ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿಯರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ), ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ, ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ, ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ, ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)
KARNATAKA BREAKING:#CongressManifesto: CONGRESS MANIFESTO'S MEGA HIGHLIGHTS IN GFX FORMAT.!#KarnatakaElection2023#KarnatakaKurukshetra2023 pic.twitter.com/1wlD3FKHZZ
— Gururaj Anjan (@Anjan94150697) May 2, 2023
Congress president Mallikarjun Kharge on Tuesday released the party's manifesto or vision document for the Karnataka Assembly elections in Bengaluru. The party has named its manifesto 'Sarva Janangada Shanthiya Thota' which translates to 'Peaceful garden of all communities' and it reiterated five guarantees in its poll manifesto: Gruha Jyothi, Gruha Lakshmi, Anna Bhagya, Yuva Nidhi & Shakti. Organisations like Bajrang Dal, PFI or others promoting enmity or hatred, whether among majority or minority communities. We will take decisive action as per law including imposing a ban on any such organisations," Congress' manifesto stated.
09-02-25 07:58 pm
Bangalore Correspondent
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ; ರಾಜ್ಯ...
09-02-25 05:28 pm
Somanna, Viyayendra, BJP President; ರೆಬಲ್ ನಾಯ...
07-02-25 11:00 pm
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
09-02-25 09:32 pm
HK News Desk
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm