ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am