ಬ್ರೇಕಿಂಗ್ ನ್ಯೂಸ್
02-05-23 04:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಸಂದರ್ಶನ ನಡೆಸುವಾಗ ಈ ಅವಘಡ ಸಂಭವಿಸಿದೆ. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ರಣಹದ್ದು ಬಡಿದ ತಕ್ಷಣ ಹೆಲಿಕಾಪ್ಟರ್ ಗಾಜು ಪುಡಿಪುಡಿಯಾಗಿದ್ದು, ಒಂದು ಕ್ಷಣ ಡಿಕೆ ಶಿವಕುಮಾರ್ ಹಾಗೂ ವರದಿಗಾರನ ಮುಖದಲ್ಲಿ ಆತಂಕ ಆವರಿಸಿತ್ತು. ಖಾಸಗಿ ವಾಹಿನಿಯ ಛಾಯಾಗ್ರಾಹಕನಿಗೆ ಗಾಜಿನ ಚೂರು ಚುಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದ ಡಿಕೆಶಿ!
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೊಡ್ಡ ಹದ್ದು ಒಂದು ಬಂದು ಹೆಲಿಕಾಪ್ಟರ್ ಗ್ಲಾಸ್ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಎಚ್ಎಎಲ್ಗೆ ವಾಪಸ್ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದು ಹೇಳಿದ್ದಾರೆ.
Karnataka Pradesh Congress Committee (KPCC) president DK Shivakumar suffered a bird hit to his helicopter on the way to Mulabagilu for an election rally on Tuesday. An eagle collided with the leader's chopper 's near the Jakkur airport, the Karnataka Congress said.
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am