ಬ್ರೇಕಿಂಗ್ ನ್ಯೂಸ್
03-05-23 04:02 pm HK News Desk ಕರ್ನಾಟಕ
ಮೈಸೂರು, ಮೇ 3 : ಮೈಸೂರಿನಲ್ಲಿ ಉದ್ಯಮಿಯಾಗಿರುವ ಪುತ್ತೂರು ಮೂಲದ ಸುಬ್ರಹ್ಮಣ್ಯ ರೈ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರನಾಗಿದ್ದು ಮೈಸೂರಿನಲ್ಲಿ ಬಿಲ್ಡರ್ ಆಗಿದ್ದಾರೆ. ಮಂಗಳವಾರ ಸುಬ್ರಹ್ಮಣ್ಯ ರೈ ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಸುಬ್ರಹ್ಮಣ್ಯ ರೈ ಮನೆಯ ಅಂಗಳದ ಗಿಡದಲ್ಲಿ ಹಣ್ಣಿನ ಬಾಕ್ಸ್‌ನಲ್ಲಿ ಬಚ್ಚಿಡಲಾಗಿದ್ದ 1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಲ್ಲಿ ಸಿಹಿ ತಿಂಡಿ ಮಾರಾಟ ಮಳಿಗೆಯ ಮೇಲೂ ಐಟಿ ರೇಡ್ ಮಾಡಿದ್ದಾರೆ. ಬಾಂಬೆ ಟಿಫಾನಿಸ್ ಸಿಹಿ ತಿಂಡಿ ಅಂಗಡಿ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ, ಯಾದಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ. ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರಾಜ ಅರಸು ರಸ್ತೆ, ಸಿದ್ದಾರ್ಥ ನಗರ, ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರು ಸೇರಿದಂತೆ 5 ಪ್ರಮುಖ ನಗರದಲ್ಲಿ ಬೃಹತ್ ಐಟಿ ದಾಳಿ ನಡೆದಿದೆ.
ಬಿಜೆಪಿ ಹತಾಶೆಯಿಂದ ಐಟಿ ರೇಡ್ ಮಾಡಿಸಿದೆ ; ಅಶೋಕ್ ರೈ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ರೈ, ನನ್ನ ಅಣ್ಣನ ಮನೆಗೆ ಐಟಿ ದಾಳಿ ಆಗಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಸಹೋದರ ಒಳ್ಳೆಯ ಬಿಝಿನೆಸ್ ಮ್ಯಾನ್, ಹಾಗೆಯೇ ಒಳ್ಳೆಯ ಟ್ಯಾಕ್ಸ್ ಪೇಯರ್, ಅವನ ಮನೆ ಮೇಲಿನ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಕಚೇರಿ, ಮನೆಗೆ ಐಟಿ ರೈಡ್ ಆದ್ರೂ ನನ್ನಲ್ಲಿ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ. ಕಾರಣ ನಾನು ವರ್ಷಕ್ಕೆ ಎಷ್ಟೋ ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಚುನಾವಣೆ ಮೊದಲೇ ಸೋಲೊಪ್ಪಿಕೊಂಡಿದ್ದು ಹತಾಶೆಯಿಂದ ಐಟಿ ದಾಳಿ ಮಾಡಿಸಿದೆ ಎಂದು ಹೇಳಿದ್ದಾರೆ.
The Income Tax (I-T) department has conducted a raid at the residence of K Subrahmanya Rai in Mysuru, brother of Ashok Rai congress candidate of Puttur from Congress, Seizing Rs 1 crore cash that was hung from a small tree at the veranda of the house.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm