ನಾವು ಹನುಮನ ಭಕ್ತರಲ್ಲವೇ, ನಾವೂ ಹನುಮಾನ್ ಚಾಲೀಸ್ ಪಠಿಸುತ್ತೇವೆ, ಹಿಂದಿನ ಆರೆಸ್ಸೆಸ್ ಬೇರೆ, ಈಗಿನದ್ದು ಬೇರೆ ; ಡಿಕೆಶಿ ಟಾಂಗ್ 

04-05-23 12:58 pm       Bangalore Correspondent   ಕರ್ನಾಟಕ

ನಾವು ಕೂಡ ಹನುಮನ ಭಕ್ತರು. ನಿತ್ಯವೂ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ. ಮೋದಿ ಅವರು ನಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುವುದನ್ನು ಬಿಟ್ಟು, ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆಗಳೇನು ಎಂಬುದನ್ನು ಹೇಳಲಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. 

ಬೆಂಗಳೂರು, ಮೇ 4 : ನಾವು ಕೂಡ ಹನುಮನ ಭಕ್ತರು. ನಿತ್ಯವೂ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ. ಮೋದಿ ಅವರು ನಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುವುದನ್ನು ಬಿಟ್ಟು, ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆಗಳೇನು ಎಂಬುದನ್ನು ಹೇಳಲಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. 

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಿ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಹೇಳಲಿ. ಮೇಕೆದಾಟು, ಮಹದಾಯಿ ಯೋಜನೆ ಆರಂಭಿಸಲು ಏನಾದರೂ ಕ್ರಮ ಕೈಗೊಂಡಿದ್ದಾರಾ? ಬಿಜೆಪಿಯ ತಾಣ ಎಂದು ಹೇಳಿಕೊಳ್ಳುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ಏನಾದರೂ ಕ್ರಮ ಕೈಗೊಂಡಿದ್ದಾರಾ? ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಯಾರಾದರೂ ಈ ಭಾಗದಲ್ಲಿ ಬಂಡವಾಳ ಹೂಡಿಕೆ ಮಾಡಿದರಾ? ಎಂದು ಪ್ರಶ್ನಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರಾ? ಅವರು ಕೊಟ್ಟ ಭರವಸೆಗಳೆಲ್ಲವೂ ಹುಸಿಯಾಗಿವೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದರು. ಈಗ ಅವರದೇ ಸರ್ಕಾರ ಭ್ರಷ್ಟಾಚಾರ ಮಾಡಿದ್ದು, ಈಗ ಅದರ ಬಗ್ಗೆ ಮಾತನಾಡುತ್ತಿದ್ದಾರೆಯೇ? ಭ್ರಷ್ಟಾಚಾರ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರಾ? ಅವರದೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಶಾಸಕರ ವಿರುದ್ಧವೂ ಕ್ರಮ ಕೈಗೊಳ್ಳಲಿಲ್ಲ.

ಬಿಜೆಪಿ ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳಿಂದ ಆತಂಕ ಎದುರಾಗಿದೆ. ರಾಜ್ಯದ ಜನರಿಗೆ 200 ಯುನಿಟ್ ಉಚಿತ, ಮನೆಯೊಡತಿಗೆ 2 ಸಾವಿರ ಖಚಿತ, ಅನ್ನಭಾಗ್ಯದಲ್ಲಿ 10 ಕೆ.ಜಿ ಅಕ್ಕಿ ನಿಶ್ಚಿತ. ಯುವಕರಿಗೆ ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ ಜಾರಿ ಮಾಡುತ್ತೇವೆ. ಇವುಗಳನ್ನು ಅರಗಿಸಿಕೊಳ್ಳಲಾಗದೆ ಗೊಂದಲ ಮೂಡಿಸುತ್ತಿದ್ದಾರೆ. ಅವರು ಏನೇ ಮಾಡಿದರೂ ಕಾಂಗ್ರೆಸ್ ಪಕ್ಷ 141 ಸ್ಥಾನಗಳಲ್ಲಿ ಗೆಲವು ಸಾಧಿಸಿ ಅಧಿಕಾರಕ್ಕೆ ಬಂದೇ ಬರಲಿದೆ' ಎಂದು ತಿರುಗೇಟು ನೀಡಿದರು.

ಗುರುವಾರ ಸಂಜೆ ಹನುಮಾನ್ ಚಾಲೀಸ ಪಠಣಕ್ಕೆ ಕೆಲವು ಸಂಘಟನೆಗಳು ಕರೆ ನೀಡಿರುವ ವಿಚಾರದಲ್ಲಿ ಮಾತನಾಡಿ, ನಾವು ದಿನನಿತ್ಯ ಹನುಮಾನ್ ಚಾಲೀಸ ಪಠಣ ಮಾಡುತ್ತೇವೆ. ಅವರು ಮಾತ್ರ ಹನುಮನ ಭಕ್ತರೇ? ನಾವು ಹನುಮನ ಭಕ್ತರಲ್ಲವೇ? ಹಿಂದೆ ಇದ್ದ ಆರ್ ಎಸ್‌ಎಸ್ ಬೇರೆ, ಈಗಿರುವ ಆರ್ ಎಸ್‌ಎಸ್ ಬೇರೆ. ನಾವು ಸಮಾಜದಲ್ಲಿ ಶಾಂತಿ ಭಂಗ ಮಾಡುವ ಸಂಘಟನೆಗಳ ಬಗ್ಗೆ ಮಾತನಾಡಿದ್ದು, ಯಾವ ಸಂಘಟನೆಗಳು ಸಮಾಜದ ಶಾಂತಿಗೆ ಭಂಗ ಮಾಡುತ್ತವೆಯೋ ಅಂತಹ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದೇವೆ ಎಂದರು.

 KPCC president DK Shivakumar on Wednesday said the promise of banning Bajrang Dal in the Congress manifesto is being misinterpreted.“We are also devotees of Lord Hanuman. But what is the connection between Hanuman and Bajrang Dal, which are different from each other? Bajrang Dal cannot become Hanuman only because of its name.