ಬ್ರೇಕಿಂಗ್ ನ್ಯೂಸ್
04-05-23 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4 : ಮೇ 6ರಂದು ಪ್ರಧಾನಿ ಮೋದಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಚಾರ ಸಭೆ ನಡೆಸುವುದೆಂದು ನಿಗದಿಯಾಗಿತ್ತು. ಕೊನೆಕ್ಷಣದಲ್ಲಿ ಮೋದಿ ಚಿತ್ತಾಪುರಕ್ಕೆ ಪ್ರಚಾರ ಹೋಗುವುದನ್ನು ರದ್ದು ಪಡಿಸಲಾಗಿದೆ.
ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎನ್ನಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧ ಪ್ರಕರಣಗಳಿದ್ದು, ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಪ್ರಕರಣ ಸಾಬೀತಾಗಿದ್ದು, ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ. ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಪರಿಸ್ಥಿತಿಯಲ್ಲಿ ಮಣಿಕಂಠನ ಪರ ಮೋದಿ ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೀಡಾಗುವ ಸಾಧ್ಯತೆಗಳಿವೆ. ಏಪ್ರಿಲ್ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿದ್ದರು. ಮಣಿಕಂಠನ ಮೇಲೆ ಹಲವಾರು ಪ್ರಕರಣ ಇದೆ. ಸಿಎಂ ಅವರೇ ಆತನ ಪರ ಮತ ಯಾಚನೆ ಮಾಡುವುದು ದುರಂತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.
It is known from sources that an allegation of theft against BJP candidate Manikant Rathod has been proven, in light of which Prime Minister Narendra Modi’s campaign in Chittapur has been cancelled. Reports said that the public meeting that PM Modi was supposed to attend in the Chittapur constituency of Kalaburagi district on May 6 has been cancelled. There are several criminal cases against Manikant Rathod, the BJP candid
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm