ಬ್ರೇಕಿಂಗ್ ನ್ಯೂಸ್
04-05-23 04:18 pm HK News Desk ಕರ್ನಾಟಕ
ಹೊನ್ನಾವರ, ಮೇ 4 : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಈ ಸಂದರ್ಭ ಹೊನ್ನಾವರದ ರಾಮತೀರ್ಥ ಬಳಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಸಂದರ್ಭ ಸ್ಮೋಕ್ ಕ್ಯಾಂಡಲ್ ಪರೀಕ್ಷೆ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಈ ಪ್ರಯೋಗ ಮಾಡುವಾಗ ಬೆಂಕಿ, ಹೊಗೆ ಕಾಣಿಸುತ್ತದೆ. ಇದು ಇಂದು ಸ್ವಲ್ಪ ಜಾಸ್ತಿಯೇ ಆಗಿ, ಹುಲ್ಲಿನ ಬಣವೆಗೆ ಬೆಂಕಿ ಹಿಡಿಯಿತು. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದರು.
ಹೆಲಿಕಾಪ್ಟರ್ ಪಕ್ಕದಲ್ಲಿಯೇ ಸಮೀಪ ಹರಡಿದ್ದ ಹುಲ್ಲಿಗೆ ಬೆಂಕಿ ಹತ್ತಿಕೊಂಡ ಕಾರಣ ಒಂದು ಕ್ಷಣ ಆತಂಕದ ವಾತಾವರಣವೂ ನಿರ್ಮಾಣವಾಗಿತ್ತು. ಹೆಲಿಕಾಪ್ಟರ್‌ಗೆ ಸಿಗ್ನಲ್ ಕೊಡುವ ಸ್ಮೊಕ್ ಕ್ಯಾಂಡಲ್‌ನಿಂದ ಹೆಲಿಪ್ಯಾಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಹೊನ್ನಾವರದ ಸೇಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗಿಯಾಗಲು ಡಿಕೆ ಶಿವಕುಮಾರ್ ಆಗಮಿಸಿದ್ದರು. ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರಕ್ಕೆ ಆಗಮಿಸಿದ್ದರು.
ಡಿಕೆಶಿ ಅವರೂ ಬಜರಂಗದಳ ನಿಷೇಧದ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಾಗ ಹೆಲಿಕಾಪ್ಟರ್‌ಗೆ ಏನಾದರೂ ಸಂಭವಿಸುವುದರ ಕುರಿತು ಅವರು ಜ್ಯೋತಿಷಿಗಳ ಮೊರೆ ಹೋಗಿರುವ ಕುರಿತು ಸುದ್ದಿಯಾಗಿತ್ತು. ಮೇ 2ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು, ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು, ಪೈಲಟ್ ಸಮಯ ಪ್ರಜ್ಞೆಯಿಂದ ಸುರಕ್ಷಿತವಾಗಿ ಹೆಚ್‌ಎಎಲ್‌ನಲ್ಲಿ ಇಳಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಡಿಕೆಶಿ ದೇವರ ಮೊರೆ ಹೋಗಿದ್ದರು. ಖ್ಯಾತ ಜ್ಯೋತಿಷಿ ದ್ವಾರಕನಾಥ್ ಅವರು ಪಂಚ ಪಕ್ಷಿ ಶಾಸ್ತ್ರ ಪರಿಣಿತ ಗಜೇಂದ್ರ ಅವರೊಂದಿಗೆ ಚರ್ಚೆ ಮಾಡಿದ್ದರು. ಹದ್ದು ಮೃತಪಟ್ಟ ದೋಷವನ್ನು ಪರಿಹರಿಸಿಕೊಳ್ಳಲು, ಹಲಸೂರಿನಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಬೇಕು ಎಂದು ಸಲಹೆ ನೀಡಿದ ಕುರಿತು ವರದಿಯಾಗಿತ್ತು.
Sudden fire catches at Helipad in Honnavar as DK Shivakumar lands. Just few days ago DK Shivakumar helicopter had rammed an Eagle in the air.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am