ಕರ್ನಾಟಕ ಉದ್ದಗಲಕ್ಕೆ ಬಿಜೆಪಿ ದಿಗ್ಗಜರ ಪ್ರಚಾರ ಭರಾಟೆ ; ಮೋದಿ, ಯೋಗಿ, ಷಾ, ನಡ್ಡಾರೆಲ್ಲ ಏಕಕಾಲದಲ್ಲಿ ಪ್ರಚಾರ ಕಣಕ್ಕೆ 

06-05-23 01:06 pm       Bangalore Correspondent   ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಘಟಾನುಘಟಿ ನಾಯಕರು ಏಕಕಾಲದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. 

ಬೆಂಗಳೂರು, ಮೇ 6 : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಘಟಾನುಘಟಿ ನಾಯಕರು ಏಕಕಾಲದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. 

ನರೇಂದ್ರ ಮೋದಿ ಬೆಳಗ್ಗೆ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿದರೆ, ಬಾದಾಮಿ ಮತ್ತು ಹಾವೇರಿಯಲ್ಲಿಯೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸವದತ್ತಿ, ಅಥಣಿ, ರಾಯಭಾಗ, ಚಿಕ್ಕೋಡಿ ಹಾಗೂ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 

Modi kicks off roadshow in Bengaluru, BJP estimates 10 lakh people came to  greet PM - The Hindu

Karnataka assembly elections: PM Modi's roadshow begins in Bengaluru amid  fanfare | Karnataka Election News - Times of India

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮದ್ದೂರು, ಚಿಂತಾಮಣಿ ಹಾಗೂ ಬಾಗೇಪಲ್ಲಿ, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಬೀದರ್ ಜಿಲ್ಲೆಯ ಔರಾದ್‌, ಬಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್‌, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ ವಿರಾಜಪೇಟೆ, ಮಡಿಕೇರಿ, ಬೆಳ್ತಂಗಡಿ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹಗರಿಬೊಮ್ಮನಹಳ್ಳಿ, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

PM Modi's road-show begins in Bengaluru amid fanfare

Modi kicks off roadshow in Bengaluru, BJP estimates 10 lakh people came to  greet PM - The Hindu

ಉಳಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬ್ಯಾಡಗಿ, ಹಾವೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀರ್ಥಹಳ್ಳಿ, ಬೈಂದೂರು, ಹೊನ್ನಾಳಿ ಹಾಗೂ ಸೊರಬ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಯಾದಗಿರಿ, ಸೇಡಂ, ಕಲ್ಬುರ್ಗಿ ಗ್ರಾಮೀಣ, ನಟ ಕಿಚ್ಚ ಸುದೀಪ್‌ ದೇವನಹಳ್ಳಿ, ದೊಡ್ಡಬಳ್ಳಾಪುರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಹೊಸಕೋಟೆ ವಿಧಾನಸಭಾ ಚುನಾವಣೆಯಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಪರ ಮತಯಾಚನೆ ನಡೆಸಲಿದ್ದಾರೆ. ಮೇ 10ರಂದು ನಡೆಯುವ ಚುನಾವಣೆಗೆ ಕೆಲವೇ ದಿನ ಉಳಿದಿದ್ದು ಬಿಜೆಪಿ ಪ್ರಚಾರ ಭರಾಟೆ ತಾರಕಕ್ಕೇರಿದೆ.

Prime Minister Narendra Modi embarked upon a 26-km long roadshow in Bengaluru on Saturday May 6 morning. The roadshow began at Someshwara Sabha Bhavan, Konanakunte in Bommanahalli Assembly constituency around 10 a.m. It will culminate at Kadu Malleshwara temple, in Malleswaram, after passing through 13 Assembly constituencies.