ಚುನಾವಣೆಗೆ ಫಂಡಿಂಗ್ ; ಬೆಂಗಳೂರು, ಮೈಸೂರಿನಲ್ಲಿ ಐಟಿ ದಾಳಿ ವೇಳೆ 20 ಕೋಟಿಗೂ ಹೆಚ್ಚು ನಗದು, ಚಿನ್ನಾಭರಣ ಪತ್ತೆ 

06-05-23 09:51 pm       Bangalore Correspondent   ಕರ್ನಾಟಕ

ಬೆಂಗಳೂರು ಮತ್ತು ಮೈಸೂರು ನಗರದ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ಮೇ 6 : ಬೆಂಗಳೂರು ಮತ್ತು ಮೈಸೂರು ನಗರದ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡ್ತಿದ್ದ ಫೈನಾನ್ಸಿಯರ್‌ ಮನೆಗಳ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್‌ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. 

ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

The Income Tax Department has seized Rs 15 crore cash and Rs five crore worth jewellery after raids at multiple locations in Bengaluru and Mysuru, targeting a few financiers who have allegedly mobilised resources for funding candidates in the May 10 Karnataka Assembly elections, sources in the I-T department said on Saturday.