ಬ್ರೇಕಿಂಗ್ ನ್ಯೂಸ್
08-05-23 11:42 am Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‍ಎಸ್‍ಎಲ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಈ ಬಾರಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದರೆ ಅಚ್ಚರಿ ಎನ್ನುವಂತೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಗಿಟ್ಟಿಸಿದೆ.
ಚಿತ್ರದುರ್ಗ ಗರಿಷ್ಠ ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಸ್ಥಾನ ಮಂಡ್ಯ, ಮೂರನೇ ಸ್ಥಾನ ಹಾಸನ ಜಿಲ್ಲೆಗೆ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಸ್ಥಾನ ಯಾದಗಿರಿ ಜಿಲ್ಲೆಯಾಗಿದೆ. ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ80.08ರಷ್ಟು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ 96.80%, ಹಾಸನ 96.68%, ಮಂಡ್ಯ 96.74%, ಯಾದಗಿರಿ 75.49% ರಷ್ಟು ಫಲಿತಾಂಶ ಗಿಟ್ಟಿಸಿದೆ.
SSLCಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ;
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು,
ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ,
ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ,
ಬೀಮನಗೌಡ ಪಾಟೀಲ್-ವಿಜಯಪುರ 625 ಅಂಕದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದಾರೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್(SMS) ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತದೆ. ಮೊಬೈಲ್ ನಲ್ಲೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್ ತೆರೆಯಬೇಕು.
ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು. ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.
SSLC result 2023, 83.89% pass, girl fare better; Chitradurga bags top, Udupi in 18th rank, Dakshina Kannada falls down at 19th rank. The Class 10 SSLC exams for the year 2023 were conducted from March 31 to April 15.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm