ಬ್ರೇಕಿಂಗ್ ನ್ಯೂಸ್
09-05-23 12:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.
ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ.
ರಾಜ್ಯದ ಕಮಿಷನರೇಟ್‌ಗಳಲ್ಲಿ ಕಮಿಷನ್‌ರ್‌ಗಳು, ಜಿಲ್ಲೆಗಳಲ್ಲಿ ಎಸ್‌ಪಿಗಳು ಚುನಾವಣಾ ನಿಗಾ ವಹಿಸಲಿದ್ದಾರೆ. ಚುನಾವಣಾ ಭದ್ರತೆಗೆ 304 ಡಿವೈಎಸ್‌ಪಿಗಳು, 991 ಇನ್‌ಸ್ಪೆಕ್ಟರ್‌ಗಳು, 2,610 ಮಂದಿ ಸಬ್ ಇನ್‌ಸ್ಪೆಕ್ಟರ್‌ಗಳು, 5,803 ಎಎಸ್‌ಐಗಳು, 46,421 ಮುಖ್ಯಪೇದೆಗಳು, 27,990 ಮಂದಿ ಹೋಮ್ಗಾರ್ಡ್‌ಗಳು ಸೇರಿ 84,119 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅವಶ್ಯಕತೆಗೆ ಅನುಗುಣವಾಗಿ ಅಧಿಕಾರಿಗಳ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯದಿಂದ 8,500 ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಇದರ ಜತೆಗೆ 650 ಸಿಎಪಿಎಫ್ ಕಂಪನಿಗಳ ಜತೆಗೆ ರಾಜ್ಯ ಶಸಸ ಮಿಸಲು ಪಡೆಯನ್ನು ನಿಯೋಜಿಸಲಾಗಿದೆ.
ಚುನಾವಣೆಗೆ 2930 ಸೆಕ್ಟರ್ ಮೊಬೈಲ್‌ಗಳು ಕಾರ್ಯಾಚಾರಣೆಯಲ್ಲಿದ್ದು, ಒಂದೊಂದು ಸೆಕ್ಟರ್‌ಗೆ 20 ಬೂತ್‌ಗಳನ್ನು ನಿಗದಿ ಪಡಿಸಲಾಗಿದೆ. ಪಿಎಸ್‌ಐ, ಎಎಸ್‌ಐ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿರಂತರ ಗಸ್ತುಗೆ ಮೀಸಲಿರಿಸಲಾಗಿದೆ.
ಸೆಕ್ಟರ್ ಮೊಬೈಲ್‌ಗಳ ಮೆಲ್ವಿಚಾರಣೆಗೆ 749 ಮೇಲ್ವಿಚಾರಣಾ ಮೊಬೈಲ್‌ಗಳಿದ್ದು, ಅವುಗಳ ಉಸ್ತುವಾರಿಗೆ ಓರ್ವ ಪೊಲೀಸ್ ಇನ್‌ಸ್ಪೆಕ್ಟರ್, 4 ಸೆಕ್ಟರ್ ಮೊಬೈಲ್ ಮೇಲ್ವಿಚಾರಣೆಗೆ ಓರ್ವ ಡಿವೈಎಸ್‌ಪಿ ನೇಮಿಸಲಾಗಿದೆ. ಚುನಾವಣಾ ಅಕ್ರಮಗಳನ್ನು ತಡೆಯಲು 700ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಿ ಸೂಕ್ಮ ಪ್ರದೇಶಗಳನ್ನು ಒಳಗೊಂಡತೆ ಅಂತರಾಜ್ಯ, ಅಂತರ್ ಜಿಲ್ಲಾ ಗಡಿ ಭಾಗಗಳಲ್ಲಿ 700ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 30,418 ಭದ್ರತಾ ಪ್ರಕರಣಗಳನ್ನು ದಾಖಲಿಸಿ ಅವುಗಳಲ್ಲಿ ಸನ್ನಡತೆಯ ಆಧಾರದ ಮೇಲೆ 53,406 ವ್ಯಕ್ತಿಗಳನ್ನು ಬಾಂಡ್ ಒವರ್ ಮಾಡಲಾಗಿದೆ. ಚುನಾವಣೆ ವೇಳೆ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ 714 ವ್ಯಕ್ತಿಗಳ ವಿರುದ್ಧ ಗಡಿಪಾರು ಕಾಯ್ದೆಯಡಿ ಕ್ರಮ ಕೈಗೊಂಡು 68 ಹ್ಯವಾಸಿ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ.
ಚುನಾವಣಾ ಕರ್ತವ್ಯಕ್ಕೆ ನೇಮಿಸಲಾದ ಒಟ್ಟು 650 ಸಿಎಪಿಎಫ್ ಕಂಪನಿಗಳಲ್ಲಿ 101 ಸಿಆರ್‌ಪಿಎಫ್, 108 ಬಿಎಸ್‌ಎಫ್, 75 ಸಿಐಎಸ್‌ಎಫ್, 70 ಐಟಿಬಿಪಿ, 75 ಎಸ್‌ಎಸ್‌ಬಿ, 35 ಆರ್‌ಪಿಎ್ ಹಾಗೂ 186 ಎಸ್‌ಎಪಿ ಕಂಪನಿಗಳಿವೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಥೀಮ್ ಬೇಸ್ಡ್ ಮತಗಟ್ಟೆ
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ವಿನೂತನ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ.
ಏನಿದು ಪಿಂಕ್ ಮತಗಟ್ಟೆ?
ಪಿಂಕ್ ಮತಗಟ್ಟೆ ಎಂದರೆ, ಇದು ವಿಶೇಷವಾಗಿ ಮಹಿಳೆಯರಿಗಾಗಿ ಆಗಿದೆ. ಮಹಿಳೆಯರು ಈ ಪಿಂಕ್ ಬೂತ್ ಗಳಲ್ಲಿ ಮತ ಚಲಾಯಿಸಬಹುದಾಗಿದೆ. ಮತದಾನದ ವೇಳೆ ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ 5 ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದೆ.
ಈ ಪಿಂಕ್ ಬೂತ್ ಗಳಲ್ಲಿ ಮಹಿಳಾ ಸಿಬ್ಬಂದಿಯೇ ಕಾರ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತದಾನ ಹಕ್ಕು ಚಲಾಯಿಸಲು ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು, ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್ ಬೂತ್ ನಿರ್ಮಾಣ ಮಾಡಲಾಗಿದೆ.
The Karnataka State Election Commission has made elaborate arrangements for the May 10 Assembly elections in the state. To ensure no untoward incidents take place, the commission is deputing 2.2 lakh police personnel across the state.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm