ಬ್ರೇಕಿಂಗ್ ನ್ಯೂಸ್
11-05-23 05:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಬರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗುವುದಿಲ್ಲ, ಬದಲಾಗಿ ಬಿಜೆಪಿಗೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತಗಟ್ಟೆ ಸಮೀಕ್ಷೆ ಸುಳ್ಳಾಗುತ್ತದೆ ;
ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯದ ಜನ ಸುಳ್ಳು ಮಾಡುತ್ತಾರೆ ಎಂದಿದ್ದೆ. ಇದೀಗ ನಮ್ಮ ಕಾರ್ಯಕರ್ತರು ನೀಡಿದ ಬೂತ್ ಮಟ್ಟದ ವರದಿ ಪ್ರಕಾರ ಎಕ್ಸಿಟ್ ಪೋಲ್ ಸುಳ್ಳಾಗುತ್ತದೆ ಎಂದರು.
ನಾವು ಈ ಬಾರಿ ಬಿಜೆಪಿ 120 ಸೀಟ್ ಕ್ರಾಸ್ ಮಾಡುತ್ತೇವೆ ಎಂಬ ವಿಶ್ವಾಸ ಇದೆ ಎಂದ ಅವರು, ಹಳೆ ಮೈಸೂರು ಭಾಗದಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಯಡಿಯೂರಪ್ಪ ಅವರು 120 ದಾಟುತ್ತೆ ಎಂದಿದ್ದಾರೆ. ಅವರ ವರದಿ ಸುಳ್ಳಾಗಲ್ಲ ಎಂದರು.
ಈ ಬಾರಿ ಚುನಾವಣೆಯಲ್ಲಿ ಕರ್ನಾಟಕ 72.67 % ಮತ ಚಲಾಯಿಸಿದ್ದಾರೆ. ಕೆಲವು ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗಿದೆ. ರಾಜ್ಯದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
‘ಈ ಬಾರಿ ನಮ್ಮ ಕಾರ್ಯಕರ್ತ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇನ್ನು ತಾವು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ‘ ಸಿಎಂ ಸ್ಥಾನದ ವಿಚಾರ ಬಂದಾಗ ನಾನು ರಾಜ್ಯಕ್ಕೆ ಬರುವ ಪ್ರಶ್ನೆ ಇಲ್ಲ. ನನಗೆ ಮೋದಿ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಅಲ್ಲೇ ಖುಷಿಯಾಗಿ ಇದ್ದೇನೆ. ಮತಗಟ್ಟೆ ಸಮೀಕ್ಷೆ ಸುಳ್ಳಾಗುತ್ತದೆ. ನಾವು ಬಹುಮತದ ಸರ್ಕಾರ ಮಾಡುವ ವಿಶ್ವಾಸ ಇದ್ದು, ಬೂತ್ ಮಟ್ಟದ ಕಾರ್ಯಕರ್ತರ ವರದಿ ಪ್ರಕಾರ 120 ಕ್ಕೂ ಹೆಚ್ಚು ಸೀಟುಗಳಲ್ಲಿ ಮುಂದೆ ಇದ್ದೇವೆ. ಪ್ರಧಾನಿ ಮೋದಿ ರೋಡ್ ಶೋ ಮತದಾರರ ಮೇಲೆ ಪರಿಣಾಮ ಆಗಿದೆ ಎಂದಿದ್ದಾರೆ.
ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಹ ಕಾಂಗ್ರೆಸ್ 110 ರಿಂದ 120 ಸ್ಥಾನಗಳ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಜೆಡಿಎಸ್ 20- 24 ಸ್ಥಾನ ಪಡೆಯಲಿದೆ ಎಂದಿದೆ. ಇಂಡಿಯಾ ಟುಡೆ-ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 122-140 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿ 62-80 ಸ್ಥಾನಕ್ಕೆ ಸೀಮಿತವಾಗಲಿದೆ. ಜೆಡಿಎಸ್ 20-25 ಕ್ಷೇತ್ರಗಳಲ್ಲಿ ಗೆಲ್ಲಿದೆ. ಇತರೆ ಎಲ್ಲಾಸಮೀಕ್ಷೆಗಳು ಫಲಿತಾಂಶವನ್ನು ಬಹುತೇಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಂಚಿದ್ದು, ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಮತಗಟ್ಟೆ ಸಮೀಕ್ಷೆಗಳು ನುಡಿದಿರುವ ಭವಿಷ್ಯವು ಮೇ 13 ರಂದು ಪ್ರಕಟವಾಗಲಿರುವ ಫಲಿತಾಂಶದತ್ತ ಕುತೂಹಲವನ್ನು ಮತ್ತಷ್ಟು ಹಚ್ಚಿಸಿದೆ.
Shobha karandlaje says BJP will bag major victory in Karnataka, dont trust in Exit poll, one of our karyakarta will be next CM she added speaking at the press meet held in Bangalore.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm