ಬ್ರೇಕಿಂಗ್ ನ್ಯೂಸ್
12-05-23 11:58 am Bangalore Correspondent ಕರ್ನಾಟಕ
ಬೆಂಗಳೂರು, ಮೇ 12: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.
ಸಿಂಗಾಪುರಕ್ಕೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು, 50 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಈ ಬಾರಿ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.
ಹಲವು ಸಮೀಕ್ಷೆಗಳು ಜೆಡಿಎಸ್ ಪಕ್ಷ ಬಹಳ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹೇಳಿವೆ. ಆದರೆ, ನಮ್ಮ ಪಕ್ಷ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.
ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ದಿಟ್ಟ ನಿಲುವನ್ನು ಹೊಂದಿದ್ದಾರೆ.
ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ವಿಧಿಸಲು ಮುಂದಾಗಿದ್ದಾರೆ. ಸರ್ಕಾರವನ್ನು ನಡೆಸಲು ಸ್ವತಂತ್ರ ನೀಡುವುದು, ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು, ಯಾರು ಹಿಡಿತಸಾಧಿಸಬಾರದು ಎಂಬುದು ಕುಮಾರಸ್ವಾಮಿಯವರ ಷರತ್ತುಗಳಾಗಿವೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು, ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು. ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂಬ ಷರತ್ತುಗಳನ್ನು ಮುಂದಿಟ್ಟಿದ್ದಾರೆಂದು ತಿಳಿದುಬಂದಿದೆ.
ಜೆಡಿಎಸ್ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಒಂದೆರೆಡು ಬಾರಿ ಜನಾದೇಶ ಮುರಿದು ಬೀಳಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು. 2022 ರ ಡಿಸೆಂಬರ್‌ನಲ್ಲಿ, 2023 ರ ಚುನಾವಣೆಯ ನಂತರ ಕೇಸರಿ ಪಕ್ಷವು ತನ್ನ ಬಳಿಗೆ ಹೋಗಬೇಕಾಗುತ್ತದೆ ಎಂದು ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದರು.
ನಂತರ, ಮಾರ್ಚ್‌ನಲ್ಲಿ, ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದರಂತೆ. ಇದನ್ನು ದೇವೇಗೌಡರು ಸಹ ದೃಢಪಡಿಸಿದ್ದಾರೆ. ಕರ್ನಾಟಕವು 2018, 2008 ಮತ್ತು 2004 ರಲ್ಲಿ ಜನಾದೇಶ ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ, ಇದರ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರಕ್ಕೆ ಕಾರಣವಾಯಿತು.
Ready for alliance with either the BJP or Congress depending on which party fulfils his conditions says HD Kumaraswamy. Kumaraswamy’s offer is in the context of seven out of 10 exit polls coming out on poll day on Wednesday indicating a fractured mandate while showing Congress as the single-largest party.
03-02-25 10:38 pm
HK News Desk
BY Vijayendra: ನಾನೇ ಮತ್ತೆ ಅಧ್ಯಕ್ಷನಾಗುತ್ತೇನೆ,...
03-02-25 08:36 pm
ಸಿದ್ದರಾಮಯ್ಯ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಮಾಡಿದ...
03-02-25 08:20 pm
BJP Shivaraj Tangadagi, BJP: 'ಶುಭವಾಗಲಿ' ಬರೆಯಲ...
03-02-25 03:18 pm
CM Siddaramaiah: ದಿಢೀರ್ ಮಂಡಿ ನೋವು ; ಸಿಎಂ ಸಿದ್...
02-02-25 02:31 pm
03-02-25 11:01 pm
HK News Desk
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
2025ರ ಕೇಂದ್ರ ಬಜೆಟ್ ಗುಂಡಿನ ಗಾಯಕ್ಕೆ ಹಾಕಿದ ಬ್ಯಾಂ...
01-02-25 05:51 pm
03-02-25 07:38 pm
Mangalore Correspondent
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am