ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ; ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಿನ್ನಡೆ, ಬಿಜೆಪಿ ಅಭ್ಯರ್ಥಿ ಮಹೇಶ್ ತೆಂಗಿನ ಕಾಯಿ ಮುನ್ನಡೆ

13-05-23 09:36 am       HK News Desk   ಕರ್ನಾಟಕ

ಬಂಡಾಯದ ಕಹಳೆಯೊಂದಿಗೆ ಇಡೀ ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಿನ್ನಡೆ ಅನುಭವಿಸಿದ್ದಾರೆ. ಮಹೇಶ್ ಟೆಂಗಿನ ಕಾಯಿ ಮುನ್ನಡೆ ಸಾಧಿಸಿದ್ದಾರೆ.

ಧಾರವಾಡ, ಮೇ 13 : ಬಂಡಾಯದ ಕಹಳೆಯೊಂದಿಗೆ ಇಡೀ ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಿನ್ನಡೆ ಅನುಭವಿಸಿದ್ದಾರೆ. ಮಹೇಶ್ ಟೆಂಗಿನ ಕಾಯಿ ಮುನ್ನಡೆ ಸಾಧಿಸಿದ್ದಾರೆ.

ಮಾಜಿ ಸಿಎಂ, ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕರಾಗಿದ್ದ ಜಗದೀಶ್ ಶೆಟ್ಟರ್, ಬಿಜೆಪಿ ಟಿಕೆಟ್ ನಿರಾಕರಿಸಿದ ಬಳಿಕ ಬಂಡಾಯ ಎದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಮಹೇಶ್ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿತ್ತು. 

2018ರ ಚುನಾವಣೆ ಮಾತ್ರವಲ್ಲ, ಕಳೆದ 6 ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್, ಹಲವು ದಶಕಗಳ ಕಾಲ ಬಲಪಂಥೀಯ ಸಿದ್ಧಾಂತಗಳಿಗೆ ಬದ್ಧರಾಗಿದ್ದರು. ಬಿಜೆಪಿ ಭದ್ರಕೋಟೆ ಎಂದೇ ಹೆಸರಾಗಿದ್ದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು.

Hubli Dharwad Central will witness a fierce battle between Siddalingeshgow da Mahanthavadeyar from JD(S) vs Jagadish Shettar from INC vs Mahesh Tenginakai from BJP. The results for the Hubli constituency will be declared soon.