ಬ್ರೇಕಿಂಗ್ ನ್ಯೂಸ್
13-05-23 12:24 pm HK News Desk ಕರ್ನಾಟಕ
ಧಾರವಾಡ, ಮೇ 13: ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಭರ್ಜರಿ ಜಯ ಗಳಿಸಿದ್ದಾರೆ. ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ಭಾರೀ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ವಿನಯ್ ಕುಲಕರ್ಣಿ ಗೆಲುವಿನ ಸಾಧನೆ ಮಾಡಿದ್ದಾರೆ.
ಧಾರವಾಡ ಜಿಪಂ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿಗೆ ನಿರ್ಬಂಧಿಸಲಾಗಿತ್ತು. ಆದರೂ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮೃತ್ ದೇಸಾಯಿ ಅವರು ಸುಮಾರು 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು ಅನುಭವಿಸಿದ್ದಾರೆ.
ವಿನಯ್ ಕುಲಕರ್ಣಿ ಪರ ಅವರ ಪತ್ನಿ ಹಾಗೂ ಮಕ್ಕಳು ನಿರಂತರ ಪ್ರಚಾರ ನಡೆಸಿದ್ದರು. ನಾಮಪತ್ರ ಕೂಡ ಅವರೇ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ದಿನ ಮೊಬೈಲ್‌ನಲ್ಲಿ ವಿಡಿಯೋ ಕಾಲ್ ಮೂಲಕ ಕಾರ್ಯಕರ್ತರ ಜೊತೆ ಮಾತನಾಡಿದ್ದ ಅವರು, ನನ್ನನ್ನು ಜಿಲ್ಲೆಗೆ ಬರಲು ನಿಷೇಧಿಸಿದ್ದರೂ ನೀವು ನನಗಾಗಿ ಇಷ್ಟು ಜನ ಬಂದಿದ್ದೀರಿ. ಈ ರೀತಿಯ ಕುತಂತ್ರ ರಾಜಕಾರಣ ಮಾಡಬಾರದು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.
ಕಳೆದ ಬಾರಿ ಏನಾಗಿತ್ತು?
ಧಾರವಾಡ ಕ್ಷೇತ್ರದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಮೃತ್ ಅಯ್ಯಪ್ಪ ದೇಸಾಯಿ ಅವರು ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಸೋಲು ಅನುಭವಿಸಿದ್ದರು. ಅಮೃತ್ ದೇಸಾಯಿ85,123 ಮತಗಳನ್ನು ಪಡೆದಿದ್ದರೆ, ವಿನಯ್ ಕುಲಕರ್ಣಿ 64,783 ಮತ ಪಡೆದಿದ್ದರು. ಈ ಮೂಲಕ ಅಮೃತ್ ದೇಸಾಯಿ 20,340 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.
Inc Candidate Vinay Kulkarni Wins 2023 Karnataka Assembly Elections From Dharwad , Defeating Bjp Candidate Amrut Ayyappa Desai. Follow Abp Live For All Karnataka Election 2023 Results Analysis And Expert Opinion.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am