ಬ್ರೇಕಿಂಗ್ ನ್ಯೂಸ್
14-05-23 01:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಮತ ಎಣಿಕೆ ನಡೆದಾಗ 160 ಮತಗಳಿಂದ ಗೆದ್ದಿರುವುದಾಗಿ ಘೋಷಿಸಲಾಗಿತ್ತು. ಆದರೆ ತದನಂತರ ಸಂಸದ ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿ ಅಕ್ರಮ ನಡೆಸಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.



ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರದಲ್ಲಿ ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಯಿತು.ನಂತರ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು.
ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದರು.


ಇನ್ನು, ಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಎಂದು ಅಂತಿಮವಾಗಿ ಅಧಿಕೃತ ಘೋಷಣೆಯಾಗುತ್ತಿದ್ದಂತೆ ಮೊದಲ ಬಾರಿ ಮತ ಎಣಿಕೆಯಲ್ಲಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ ಕೇಂದ್ರದ ಬಳಿ ಕಣ್ಣೀರು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಇಂದು ಭಾನುವಾರವೇ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಸೌಮ್ಯಾರೆಡ್ಡಿ ಘೋಷಿಸಿದರು. ಈ ಇಡೀ ಪ್ರಹಸನಕ್ಕೆ ಜಯನಗರದ ಪಕ್ಕದ ಅಸೆಂಬ್ಲಿ ಕ್ಷೇತ್ರ ಬಿಟಿಎಂ ಲೇಔಟಿನಿಂದ 8ನೇ ಬಾರಿಗೆ ಸತತವಾಗಿ ಗೆಲುವು ಸಾಧಿಸಿದ ಸೌಮ್ಯಾ ರಡ್ಡಿ ಅವರ ಅಪ್ಪ ರಾಮಲಿಂಗಾರೆಡ್ಡಿ ಸಾಕ್ಷಿಯಾದರು.

ಮೊದಲ ಬಾರಿ ಮತ ಎಣಿಕೆಯಲ್ಲಿ ನನಗೆ ಗೆಲುವಾಗಿತ್ತು. ತೇಜಸ್ವಿ ಸೂರ್ಯ, ಅಶೋಕ್ ಅಕ್ರಮವಾಗಿ ಮತ ಎಣಿಕೆ ಕೊಠಡಿಗೆ ಎಂಟ್ರಿ ಕೊಟ್ಟಿದ್ದರು. ಅಕ್ರಮವಾಗಿ ಬಂದು ಬಿಜೆಪಿ ಅಭ್ಯರ್ಥಿ ಗೆಲ್ಲುವಂತೆ ಮಾಡಿದ್ದಾರೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಜಯನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ಜಯನಗರ ಅಸೆಂಬ್ಲಿ ಕ್ಷೇತ್ರದಲ್ಲಿ ಒಟ್ಟು 2,09,942 ಮತದಾರರು ಇದ್ದರು. 105582 ಮಂದಿ ಪುರುಷರು, 1,04,345 ಮಹಿಳೆಯರು ಇದ್ದಾರೆ. ಕಣದಲ್ಲಿ 15 ಮಂದಿ ಅಭ್ಯರ್ಥಿಗಳು ಇದ್ದರು. ಶೇ. 53.72ರಷ್ಟು ಮತದಾನವಾಗಿತ್ತು.
BJP 16 Vote Victory in Jayanagar Seat After Late Night Counting Drama, Ramamurthy defeats Congress Sowmya Reddy, will fight leagally says sowmya. According to the EC website, Congress's Sowmya Reddy got 57,781 votes (47.85 per cent vote share) and C K Ramamurthy secured 57,797 votes.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
24-09-26 11:10 am
HK News Staffer
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm