ಬ್ರೇಕಿಂಗ್ ನ್ಯೂಸ್
14-05-23 01:42 pm HK News Desk ಕರ್ನಾಟಕ
ಮೈಸೂರು, ಮೇ 14 : ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪ್ಪ- ಮಗ ಒಟ್ಟಿಗೆ ವಿಧಾನಸಭೆಗೆ ಪ್ರವೇಶಿಸುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಮೇಲೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡರು ಹ್ಯಾಟ್ರಿಕ್ ಗೆಲುವಿನೊಂದಿಗೆ ಐದನೇ ಬಾರಿ ಶಾಸಕರಾಗಿದ್ದಾರೆ. ಪುತ್ರ ಜಿ.ಡಿ. ಹರೀಶ್‌ಗೌಡ ಹುಣಸೂರಿನಿಂದ ಜೆಡಿಎಸ್ ಟಿಕೆಟ್ ಮೇಲೆ ಪ್ರಥಮ ಬಾರಿಗೆ ಆಯ್ಕಯಾಗಿದ್ದಾರೆ.
2018ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು 2008, 2013 ರಲ್ಲಿ ಪ್ರತಿನಿಧಿಸಿದ್ದ ವರುಣಾ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರಗೆ ಬಿಟ್ಟುಕೊಟ್ಟಿದ್ದರು. ಅವರು ಈ ಹಿಂದೆ ಐದು ಬಾರಿ ಗೆದ್ದು, ಎರಡು ಬಾರಿ ಸೋತಿದ್ದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ಜೊತೆಗೆ, ದೂರದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಗೆದ್ದರು. ಯತೀಂದ್ರ ವರುಣದಿಂದ ಆಯ್ಕೆಯಾಗಿದ್ದರು. ಮೈಸೂರು ಮೂಲದ ತಂದೆ- ಮಗ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದರೂ, ಅದು ಒಂದೇ ಜಿಲ್ಲೆಯನ್ನು ಪ್ರತಿನಿಧಿಸಿರಲಿಲ್ಲ.
ಈ ಬಾರಿ ಮಾಜಿ ಸಚಿವ, ಹಾಲಿ ಶಾಸಕ ಜಿ.ಟಿ. ದೇವೇಗೌಡರು ಚಾಮುಂಡೇಶ್ವರಿ, ಅವರ ಪುತ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ. ಹರೀಶ್‌ಗೌಡ ಹುಣಸೂರಿನಿಂದ ಜೆಡಿಎಸ್ ಟಿಕೆಟ್ ಮೇಲೆ ಸ್ಪರ್ಧಿಸಿದ್ದರು. ಜಿ.ಟಿ. ದೇವೇಗೌಡರು ಹುಣಸೂರಿನಿಂದ 1998ರಲ್ಲಿ ಉಪ ಚುನಾವಣೆ, 2004ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು, 1999 ಹಾಗೂ 2008ರ ಚುನಾವಣೆಯಲ್ಲಿ ಸೋತಿದ್ದರು. ಚಾಮುಂಡೇಶ್ವರಿಯಿಂದ 2013, 2018 ರಲ್ಲಿ ಗೆದ್ದು ಶಾಸಕರಾಗಿದ್ದರು. 2006 ರಲ್ಲಿ ಜೆಡಿಎಸ್- ಬಿಜೆಪಿ, 2018 ರಲ್ಲಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿ ಜಿಲ್ಲಾ ಉಸ್ತುವಾರಿಯಾಗಿದ್ದರು.
ಹರೀಶ್‌ಗೌಡ ಕಳೆದ ಬಾರಿ ಹುಣಸೂರಿನಿಂದ ಸ್ಪರ್ಧಿಸಬೇಕಿತ್ತು. ಅವರೇ ಅಭ್ಯರ್ಥಿ ಎಂದು ಘೋಷಣೆಯೂ ಆಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕೆ.ಆರ್. ನಗರದಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದ ಎಚ್. ವಿಶ್ವನಾಥ್ ಅವರಿಗೆ ಅವಕಾಶ ಕಲ್ಪಿಸಲಾಗಿತ್ತು. 2019ರ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇತ್ತಾದರೂ ಸಮ್ಮಿಶ್ರ ಸರ್ಕಾರದ ಪತನ ನಂತರ ಜಿ.ಟಿ. ದೇವೇಗೌಡರು ಜೆಡಿಎಸ್‌ನಿಂದ ದೂರ ಇದ್ದಿದ್ದರಿಂದ ಸಾಧ್ಯವಾಗಿರಲಿಲ್ಲ. ಇದೀಗ ಇಬ್ಬರು ಗೆದ್ದು ಅವಿಭಜಿತ ಜಿಲ್ಲೆಯಿಂದ ಅಪ್ಪ- ಮಗ ಇಬ್ಬರು ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
The father-son duo won the seats they contested on the JD(S) ticket in Mysuru on Saturday. Sitting MLA G.T. Deve Gowda won with a comfortable margin in Chamundeshwari, and his son G.D. Harish Gowda tasted victory in his debut election winning from Hunsur.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm