ಗದಗದಲ್ಲಿ ಭೀಕರ ಸರಣಿ ಅಪಘಾತ ; 2 ಬೈಕ್​ಗೆ ಡಿಕ್ಕಿ ಹೊಡೆದ ಕಾರು, ಮೂರು ಮಂದಿ ಸಾವು 

15-05-23 07:27 pm       HK News Desk   ಕರ್ನಾಟಕ

ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಗದಗ, ಮೇ 14: ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಗದಗದ ಅಡವಿಸೋಮಾಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31)  ಎಂಬುವವರು ಸಾವನ್ನಪ್ಪಿದ್ದಾರೆ.

ಬೈಕ್​ನಲ್ಲಿ ತೆರಳುತ್ತಿದ್ದಾಗ ಕಾರು 2 ಬೈಕ್ ಗಳಿಗೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೈಕ್​ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Two motorcyclists and a pillion rider were killed in an accident involving two motorcycles and a car in Gadag district on Monday.