ಅಯೋಧ್ಯೆ ಬಳಿಕ ಕಾಶಿ, ಮಥುರಾ ಮುಂದಿನ ಗುರಿ ; ಶ್ರದ್ಧಾಕೇಂದ್ರ ಮಸೀದಿ ಮುಕ್ತವಾಗಲಿ : ಈಶ್ವರಪ್ಪ 

05-08-20 11:27 am       Shimoga Reporter   ಕರ್ನಾಟಕ

ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿರುವ ಮಸೀದಿಗಳನ್ನು ಕೂಡ ಧ್ವಂಸ ಮಾಡಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗ, ಆಗಸ್ಟ್ 5: ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿರುವ ಮಸೀದಿಗಳನ್ನು ಕೂಡ ಧ್ವಂಸ ಮಾಡಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕಾಶಿ ವಿಶ್ವನಾಥ ದೇವಾಲಯ ಹಾಗೂ ಮಥುರಾ ಶ್ರೀಕೃಷ್ಣ ದೇವಾಲಯ ಮರು ನಿರ್ಮಾಣ ಮಾಡುವುದು ನಮ್ಮ ಮುಂದಿನ ಉದ್ದೇಶ ಎಂದು ಅವರು ಹೇಳಿದ್ದಾರೆ. 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ನಗರದ  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಧರ್ಮ ಸಭೆಯಲ್ಲಿ ಸಚಿವರು ಮಾತನಾಡುತ್ತಿದ್ದ ವೇಳೆ ಈ ಮಾತು ಹೇಳಿದ್ದಾರೆ. 

ಅಯೋಧ್ಯೆ ರೀತಿಯಲ್ಲಿ ಕಾಶಿ, ಮಥುರಾಲ್ಲಿನ ಮಸೀದಿಗಳನ್ನೂ ತೆರವುಗೊಳಿಸಿ ತೀರುತ್ತೇವೆ. ದೇಶದ ವಿವಿಧೆಡೆಯ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ನಮ್ಮ ದೇವಸ್ಥಾನಗಳು ಧ್ವಂಸವಾಗಿರುವುದು ನಾವು ಕಾಣುತ್ತೇವೆ. ಇವನ್ನು ಮತ್ತೆ ಪುನರ್ ನಿರ್ಮಿಸಬೇಕಾಗಿದೆ ಎಂದು ಈಶ್ವರಪ್ಪ ಹೇಳಿದರು. 

ಅಯೋಧ್ಯೆಯಲ್ಲಿ ಗುಲಾಮಗಿರಿಯ ಸಂಕೇತವಾಗಿದ್ದ ಮಸೀದಿಯನ್ನು ತೆರವುಗೊಳಿಸಲಾಗಿದೆ. ಶ್ರದ್ಧಾ ಕೇಂದ್ರಗಳು ಮಸೀದಿ ಮುಕ್ತವಾಗಬೇಕಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.