ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್‌ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
04-08-25 12:40 pm
Udupi Correspondent
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm