ಬ್ರೇಕಿಂಗ್ ನ್ಯೂಸ್
19-05-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬಹುದೊಡ್ಡ ಜನಾಶೀರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ. ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ ಎಂದರು.
ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು 11 ಗಂಟೆ ಒಳಗಾಗಿ ಆಗಮಿಸಬೇಕು. ತಡವಾಗಿ ಬಂದರೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ರಸ್ತೆ ನಿರ್ಬಂಧ ಮಾಡಲಾಗಿರುತ್ತದೆ ಎಂದು ಸೂಚಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ;
ಈ ನೂತನ ಸರ್ಕಾರ ರಚನೆ ಕಾರ್ಯಕ್ರಮ, ಪಕ್ಷಾತೀತ ಕಾರ್ಯಕ್ರಮ. ಹಾಗಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವು ಅನ್ಯತಾ ಭಾವಿಸದೆ, ನೀವು ಜನಪ್ರತಿನಿಧಿಗಳಾಗಿದ್ದೀರಿ. ನೀವು ಸರ್ಕಾರದ ಭಾಗ. ಹೀಗಾಗಿ ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು
On first day of cabinet Dk Shivakumar to designate big plan, invites JDS and BJP members for CM swearing ceremony.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm