ನಾಳೆ ಸಿದ್ದು ಪ್ರಮಾಣವಚನಕ್ಕೆ 8 ರಾಜ್ಯದ ಸಿಎಂಗಳಿಗೆ ಆಹ್ವಾನ ; ಮೋದಿ ವಿರುದ್ಧ ಒಗ್ಗಟ್ಟು ಪ್ರದರ್ಶನಕ್ಕೆ ಕಾಂಗ್ರೆಸ್‌ ಪಣ, ಲೋಕಸಭಾ ಚುನಾವಣೆಗೆ ಕರ್ನಾಟಕದಿಂದಲೇ ವಿರೋಧ ಪಕ್ಷಗಳ ಪಾಂಚಜನ್ಯ!

19-05-23 07:29 pm       Bangalore Correspondent   ಕರ್ನಾಟಕ

ಕರ್ನಾಟಕದಲ್ಲಿ ಈ ಸಲ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದ್ದು, ಶನಿವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ನಡೆಯುವ ಸಿದ್ದು, ಡಿಕೆ ಪ್ರಮಾಣ ವಚನ ಸಮಾರಂಭದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂದೇಶ ನೀಡಲು ಕಾಂಗ್ರೆಸ್‌ ಮುಂದಾಗಿದೆ.

ಬೆಂಗಳೂರು, ಮೇ 19 : ‌ಕರ್ನಾಟಕದಲ್ಲಿ ಈ ಸಲ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದ್ದು, ಶನಿವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ನಡೆಯುವ ಸಿದ್ದು, ಡಿಕೆ ಪ್ರಮಾಣ ವಚನ ಸಮಾರಂಭದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂದೇಶ ನೀಡಲು ಕಾಂಗ್ರೆಸ್‌ ಮುಂದಾಗಿದೆ. ಪ್ರಮಾಣ ವಚನ ಕಾರ್ಯಕ್ರಮದ ಮೂಲಕವೇ 2024ರ ಲೋಕಸಭಾ ಚುನಾವಣೆಗೆ ಪಾಂಚಜನ್ಯ ಮೊಳಗಿಸಲು ಕಾಂಗ್ರೆಸ್‌ ತಯಾರಿ ನಡೆಸಿದೆ.

ಹೌದು, ಶನಿವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಜೊತೆ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರ ಪದಗ್ರಹಣ ಕೂಡ ನಡೆಯಲಿದೆ. ಕಂಠೀರವ ಸ್ಟೇಡಿಯಂನಲ್ಲಿ ಭವ್ಯ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ರಾಜ್ಯದ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದು, ಬಿಜೆಪಿ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ.

PM Modi in Japan today for G7 summit, likely to speak on energy security,  food | Top points - India Today

ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಪ್ರಬಲವಾಗಿ ಹೋರಾಡುತ್ತಿರುವ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ನಾಯಕರು ಆಹ್ವಾನಿಸಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಈ ಮೂವರು ಕೇಂದ್ರ ಸರ್ಕಾರದ ನಡೆಗಳನ್ನು ಹೆಜ್ಜೆ ಹೆಜ್ಜೆಗೂ ಟೀಕಿಸುತ್ತಿದ್ದು, ಬಿಜೆಪಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿದ್ದಾರೆ.

ಇವರ ಜೊತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಛತ್ತೀಸಗಢ ಸಿಎಂ ಭೂಪೇಶ್‌ ಬಗೇಲ್‌, ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್ ಸುಖು ಅವರು ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಈ ಮೂವರು ಕಾಂಗ್ರೆಸ್‌ ಸಿಎಂಗಳು ಆಗಿದ್ದು, ಜಾರ್ಖಂಡ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಕೂಡ ಸಿದ್ದು, ಡಿಕೆ ಪದಗ್ರಹಣ ಸಮಾರಂಭಕ್ಕೆ ಬರಲಿದ್ದಾರೆ. ಇವರು ಜಾರ್ಖಂಡ ಮುಕ್ತಿ ಮೋರ್ಚಾ ಪಕ್ಷದವರಾಗಿದ್ದು, ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.

Puducherry CM Allocates Home Portfolio To BJP | Nation

ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಪುದುಚೇರಿ ಮುಖ್ಯಮಂತ್ರಿ ಎನ್‌ ರಂಗಸ್ವಾಮಿ ಕೂಡ ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಬರುತ್ತಿರುವುದು ಕುತೂಹಲ ಕೆರಳಿಸಿದೆ. ಈ ಮೂಲಕ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದು, ಕಾಂಗ್ರೆಸ್‌ನ ಒಗ್ಗಟ್ಟು ಪ್ರದರ್ಶನ ಪ್ರಯತ್ನಕ್ಕೆ ಶನಿವಾರದ ಪ್ರಮಾಣ ವಚನ ಸಮಾರಂಭ ವೇದಿಕೆಯಾಗುತ್ತಿದೆ.

ಒಗ್ಗಟ್ಟು ಪ್ರದರ್ಶನದ ಜೊತೆ ಜೊತೆಗೆ ಬಿರುಕು!

ಕೇವಲ 8 ರಾಜ್ಯಗಳ ಸಿಎಂಗಳನ್ನು ಮಾತ್ರ ಕಾಂಗ್ರೆಸ್‌ ಆಹ್ವಾನಿಸಿದೆ. ಆದರೆ, ಬಿಜೆಪಿ ವಿರುದ್ಧ ಪ್ರಮುಖವಾಗಿ ಹೋರಾಟ ನಡೆಸುತ್ತಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್‌ ರಾವ್‌ ಹಾಗೂ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಪ್ರಮಾಣ ವಚನ ಕಾರ್ಯಕ್ರಮದಿಂದ ಕಾಂಗ್ರೆಸ್‌ ದೂರ ಇಟ್ಟಿದೆ. ಅದಷ್ಟೇ ಅಲ್ಲದೇ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಅವರನ್ನು ಕೂಡ ಕಾರ್ಯಕ್ರಮಕ್ಕೆ ಬರದೇ ಇರುವುದು ವಿಪಕ್ಷಗಳಲ್ಲಿನ ಒಗ್ಗಟ್ಟಿನ ಬಗ್ಗೆ ಪ್ರಶ್ನೆ ಮೂಡುತ್ತದೆ.

2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಯಾದಾಗಲೂ ಇಂತಹದ್ದೇ ಬೆಳವಣಿಗೆಯಾಗಿತ್ತು. 2019ರ ಲೋಕಸಭಾ ಚುನಾವಣೆಗೆ ಕರ್ನಾಟಕದಿಂದಲೇ ವಿಪಕ್ಷಗಳು ಮಹಾಘಟಬಂಧನ್‌ ರಚಿಸಿಕೊಂಡು ಪಾಂಚಜನ್ಯವನ್ನು ಮೊಳಗಿಸಿದ್ದವು. ಎಚ್‌ಡಿ ಕುಮಾರಸ್ವಾಮಿ ಅವರ ಪದಗ್ರಹಣ ಸಮಾರಂಭಕ್ಕೆ ಘಟಾನುಘಟಿಗಳೇ ಆಗಮಿಸಿದ್ದರು.

H D Kumaraswamy predicts December polls in Karnataka | Deccan Herald

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಎಸ್‌ಪಿ ನಾಯಕ ಅಖಿಲೇಶ್‌ ಯಾದವ್‌, ಎನ್‌ಸಿಪಿ ನಾಯಕ ಶರದ್‌ ಪವಾರ್‌, ಸಿಪಿಐ (ಎಂ) ನಾಯಕ, ಸೀತಾರಾಮ್‌ ಯೆಚೂರಿ, ಆರ್‌ಎಲ್‌ಡಿಯ ಅಜಿತ್‌ ಸಿಂಗ್‌, ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌, ಜೆಡಿಯು ನಾಯಕ ಶರದ್‌ ಯಾದವ್‌, ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ, ಸಿಪಿಐ ನಾಯಕ ಡಿ ರಾಜಾ, ಬಿಹಾರ ಡಿಸಿಎಂ ತೇಜಸ್ವಿ ಯಾದವ್‌ ಭಾಗವಹಿಸಿದ್ದರು.

Siddaramaiah will be sworn in as Chief Minister for the second term on Saturday, along with his deputy D K Shivakumar and a group of legislators as Ministers, exactly a week after Congress swept the Assembly polls in Karnataka. Congress chief M Mallikarjun Kharge has invited leaders of several like-minded parties for the swearing-in ceremony, which will see Governor Thaawarchand Gehlot administering the oath of office and secrecy to the Chief Minister and his Cabinet at 12.30 PM at Kanteerava St ..