ಬ್ರೇಕಿಂಗ್ ನ್ಯೂಸ್
20-05-23 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಕರ್ನಾಟಕದ 16ನೇ ವಿಧಾನಸಭೆಯ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನ ಅಭಿಮಾನಿಗಳ ಕರತಾಡನದ ಮಧ್ಯೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದ 9ನೇ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಳಿಕ ಸಚಿವರಾಗಿ ಬಬಲೇಶ್ವರ ಕ್ಷೇತ್ರದ ಶಾಸಕ ಎಂಬಿ ಪಾಟೀಲ್, ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ. ಪರಮೇಶ್ವರ್, ದೇವನಹಳ್ಳಿ ಕ್ಷೇತ್ರದ ಕೆ.ಎಚ್ ಮುನಿಯಪ್ಪ ಹಾಗೂ ಚಾಮರಾಜಪೇಟೆ ಕ್ಷೇತ್ರದ ಜಮೀರ್ ಅಹಮದ್ ಖಾನ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಬಿಹಾರ ಸಿಎಂ ನಿತಿಶ್ ಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೂಪೇಶ್ ಬಘೇಲಾ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ತೇಜಸ್ವಿ ಯಾದವ್, ನಟ ಕಮಲ ಹಾಸನ್, ನಟ ಶಿವರಾಜ್ ಕುಮಾರ್ ಇತ್ತಿತರ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡಿ, ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ. ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು, ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು. ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದು ಹೇಳಿದರು.
ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ. ನಾವು ನಿಮಗೆ ಸ್ವಚ್ಛ, ಭ್ರಷ್ಟರಹಿತ ಸರ್ಕಾರವನ್ನು ನೀಡುತ್ತೇವೆ ಎಂದು ಹೊಸದಾಗಿ ಚುನಾಯಿತ ಕರ್ನಾಟಕ ಸರ್ಕಾರದ ಪ್ರಮಾಣವಚನ ಸಮಾರಂಭದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
Congress veteran Siddharamaiah on Sunday was sworn in as the Chief Minister of Karnataka for the second term, along with Karnataka Congress president DK Shivakumar as his deputy. Governor Thaawarchand Gehlot administered the oath of office at Bengaluru's Kanteerava Stadium.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm