ಬ್ರೇಕಿಂಗ್ ನ್ಯೂಸ್
21-05-23 06:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಬೆಂಗಳೂರು ನಗರದ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಕೆಆರ್ ಸರ್ಕಲ್ನಲ್ಲಿ ಕಾರು ಮುಳುಗಡೆಯಾಗಿದ್ದು, ಈ ವೇಳೆ ಕಾರಿನಲ್ಲಿ ಸಿಲುಕಿದ್ದ ಇಡೀ ಕುಟುಂಬವನ್ನು ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಮುಳುಗಿದ್ದ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ಇಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಮಳೆಯ ನೀರಿನಲ್ಲಿ ಮುಳುಗಿದ್ದ ಓರ್ವ ಮಹಿಳೆ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಕೂಡಲೇ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರ ಪ್ರದೇಶ ಆರು ಮಂದಿಯ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಮಳೆ ನೀರಿನಲ್ಲಿ ಕೂಗಿಕೊಂಡಿದ್ದ ಕಾರಣ ನ್ಯೂಸ್18 ಪ್ರತಿನಿಧಿ ಸ್ಥಳದಲ್ಲಿ ಅವರನ್ನು ಗಮನಿಸಿದ್ದರು. ಕೂಡಲೇ ಸ್ಥಳದಲ್ಲಿ ಸಾರ್ವಜನಿಕರ ನೆರವು ಪಡೆದುಕೊಂಡು ಅವರನ್ನು ರಕ್ಷಣೆ ಮಾಡುವ ಕಾರ್ಯ ಮಾಡಿದ್ದರು.
ಇದೇ ಸಂದರ್ಭದಲ್ಲಿ ರ್ಯಾಪಿಡ್ ಆ್ಯಕ್ಷನ್ ಟೀಂ ಪೊಲೀಸರು ತಮ್ಮ ಕರ್ತವ್ಯಕ್ಕೆ ತೆರಳಲು ಕಾರಿನಲ್ಲಿ ಹೋಗುತ್ತಿದ್ದರು. ಕೂಡಲೇ ಮಾಧ್ಯಮ ಪ್ರತಿನಿಧಿಯ ಮನವಿಗೆ ಸ್ಪಂಧಿಸಿದ ಆ್ಯಕ್ಷನ್ ಟೀಂ ಸದಸ್ಯರು ನೀರನಲ್ಲಿ ಮುಳುಗಿದ್ದ ಸಾರ್ವಜನಿಕರ ರಕ್ಷಣೆ ಮುಂದಾಗಿದ್ದರು.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತ್ರಸ್ತ ಮಹಿಳೆಯೊಬ್ಬರು, ನಾವು ಆಂಧ್ರ ಪ್ರದೇಶ ವಿಜಯವಾಡ ಮೂಲದವರು. ಒಂದು ದಿನ ರಜೆ ಇದ್ದ ಬೆಂಗಳೂರಿನಲ್ಲಿ ಸ್ಥಳಗಳನ್ನು ನೋಡಲು ಕಾರಿನಲ್ಲಿ ಹೊರಗೆ ಬಂದಿದ್ದರು. ಮಳೆ ಆರಂಭವಾದ ಕಾರಣ ಕಬ್ಬನ್ ಪಾರ್ಕ್ನಿಂದ ಮನೆಗೆ ತೆರಳು ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸದ್ಯ ನೀರನಲ್ಲಿ ಇನ್ನು ಒಬ್ಬರು ಸಿಲುಕಿದ್ದಾರೆ ಅಂತ ಕುಟುಂಬಸ್ಥರು ಹೇಳುತ್ತಿದ್ದು, ನಾವು ಕಾರಿನಲ್ಲಿ ಆರು ಮಂದಿ ತೆರಳುತ್ತಿದ್ದೇವು ಎಂದು ಕಣ್ಣೀರಿಟ್ಟಿದ್ದಾರೆ.
ಮೃತ ಯುವತಿಯನ್ನು 22 ವರ್ಷದ ಭಾನುರೇಖಾ ಎಂದು ಗುರುತಿಸಲಾಗಿದೆ. ಯುವತಿಯನ್ನು ರಕ್ಷಣೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಬೆಂಗಳೂರಿನ ಸೈಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಯುವತಿಯನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಆದರೆ ಆಸ್ಪತ್ರೆ ಸಿಬ್ಬಂದಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಟೋದಲ್ಲೇ ಕಾಯುವಂತೆ ಮಾಡಿದ್ದು, ಆ ಬಳಿಕ ಸ್ಥಳಕ್ಕೆ ಮಾಧ್ಯಮಗಳು ಹೋಗುತ್ತಿದ್ದಂತೆ ಯುವತಿಯನ್ನು ಚಿಕಿತ್ಸೆ ಕರೆದುಕೊಂಡು ಹೋಗಿದ್ದು, ಆ ವೇಳೆಗೆ ಯುವತಿ ಸಾವನ್ನಪ್ಪಿದ್ದರು ಎಂದು ಘೋಷಣೆ ಮಾಡಿದ್ದಾರೆ.
ಇನ್ನು ಭಾರಿ ಮಳೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಮುಂಭಾಗದಲ್ಲಿ ಕಾರು, ಬೈಕ್ ಮೇಲೆ ಬೃಹತ್ ಮರ ಬಿದ್ದಿದ್ದು, ಕುಮಾರ ಕೃಪಾ ರಸ್ತೆಯನ್ನು ಬಂದ್ ಮಾಡಲಾಗಿದೆ.
ಮೆಜಸ್ಟಿಕ್, ಕೆಆರ್ ಮಾರುಕಟ್ಟೆ, ಮಲ್ಲೇಶ್ವರಂ, ನಾಗರಭಾವಿ, ಕಾಮಾಕ್ಷಿ ಪಾಳ್ಯ, ಗಿರಿನಗರ, ಜಯನಗರ, ವಿಜಯನಗರ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್ ಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಾಗದೆ ಯುವತಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ. ಇನ್ನು ಮಳೆಯ ಕುರಿತಂತೆ ಮಾಧ್ಯಮಗಳ ವರದಿ ಬೆನ್ನಲ್ಲೇ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದು, ಮೃತ ಯುವತಿಯ ಕುಟುಂಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಜನತೆ ತತ್ತರಗೊಂಡಿದ್ದು, ಜೂನ್‌ನಲ್ಲಿ ಆರಂಭವಾಗುವ ಮಳೆಗಾಲಕ್ಕೆ ನಿಮ್ಮ ತಯಾರಿ ಏನು ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದರು. ಆದರೆ ಸಿಎಂಗೆ ಸಮರ್ಪಕ ಮಾಹಿತಿಯನ್ನು ಬಿಬಿಎಂಪಿ ಅಧಿಕಾರಿಗಳು ನೀಡಲು ವಿಫಲರಾಗಿದ್ದರು. ಸಿದ್ಧರಾಮಯ್ಯರ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದರು. ಕೇವಲ ಅರ್ಧ ಗಂಟೆ ಮಳೆಗೆ ಈ ರೀತಿ ಆದರೆ ಹೇಗೆ? ನೀವು ಕುಳಿತು ಬೇಸಿಗೆ ಕಾಲದಲ್ಲಿ ಮಾಡಿದ್ದೇನು? ಈಗ ನಾನೇ ಅಲ್ಲಿಗೆ ಬರಬೇಕಾ? ಎಂದು ಸಿಎಂ ಗರಂ ಆಗಿದ್ದರು.
ಘಟನೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮಳೆ ಬಂದರೆ ಮೊದಲಿನಿಂದಲೂ ಅಂಡರ್ ಪಾಸ್ನಲ್ಲಿ ನೀರು ನಿಲ್ಲುತ್ತದೆ. ಮಳೆ ನೀರು ನಿಲ್ಲುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್ ಆಗಿದ್ದರು. ಆದರೆ ಮಳೆಯಿಂದ ಬ್ಯಾರಿಗೇಡ್ ಕೊಚ್ಚಿ ಹೋಗಿದೆ. ಇದನ್ನು ಗಮನಿಸದೆ ಚಾಲಕ ಅಂಡರ್ ಪಾಸ್ಗೆ ಬಂದಿದ್ದಾನೆ.
ಚಿಕಿತ್ಸೆ ನೀಡಲು ತಡ ಆಗಿದ್ದರೆ ತನಿಖೆ ಕೈಗೊಂಡು ಕ್ರಮಕೈಗೊಳ್ಳಲಾಗುತ್ತದೆ. ಮೃತ ಯುವತಿಯ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಯುವತಿ ಇನ್ಫೋಸಿಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಭಾನುರೇಖಾ ಕುಟುಂಬಸ್ಥರಿಗೆ ಚಿಕಿತ್ಸೆ ಅಗತ್ಯವಿದ್ದರೆ ಸರ್ಕಾರವೇ ಅದರ ವೆಚ್ಚವನ್ನು ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
Heavy rains in Bangalore, car submerged in KR Circle, four reduced, 22 year old girl dies, CM Siddaramaiah visits spot, announces Rs 5 lakh compensation. CM Siddaramaiah visited the spot and private hospital. He announced Rs 5 lakh as compensation to the Rekha’s family
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm