ಬ್ರೇಕಿಂಗ್ ನ್ಯೂಸ್
21-05-23 08:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರಿಗೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದು ನಿರಾಕರಿಸಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರಾಜ್ಯ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳಿಗೆ ಶೀಘ್ರ ಪ್ರಯಾಣಕ್ಕಾಗಿ ಮಹಾನಗರಗಳಲ್ಲಿ ಜೀರೋ ಟ್ರಾಫಿಕ್ ಸೌಲಭ್ಯವನ್ನು ನೀಡಲಾಗುತ್ತದೆ. ಸಿಎಂ ಯಾವ ರಸ್ತೆಯಲ್ಲಿ ತೆರಳುತ್ತಾರೆಂಬ ಮಾಹಿತಿ ಪಡೆದ ಸಂಚಾರಿ ಪೊಲೀಸರು ಆ ರಸ್ತೆಯಲ್ಲಿನ ವಾಹನ ಸಂಚಾರವನ್ನು 15-20 ನಿಮಿಷ ಮುಂಚೆಯೇ ತಗ್ಗಿಸಿ ಸಿಎಂ ವಾಹನ ಸರಾಗ ಸಂಚಾರಕ್ಕೆ ಅವಕಾಶ ಮಾಡುತ್ತಾರೆ. ಜತೆಗೆ ಆ ರಸ್ತೆಯಲ್ಲಿ ಪಾದಾಚಾರಿಗಳ ಓಡಾಟವನ್ನು ತಡೆಯುತ್ತಾರೆ. ಈ ಹಿಂದಿನ ಮುಖ್ಯಮಂತ್ರಿಗಳ ಈ ಸೌಲಭ್ಯ ಪಡೆದಿದ್ದರು. ಆದರೆ, ಸಿದ್ದರಾಮಯ್ಯ ಅವರು ರಸ್ತೆಯಲ್ಲಿನ ಇತರೆ ವಾಹನ ಸವಾರರಿಗೆ/ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎಂದು ಈ ಸೌಲಭ್ಯ ಬೇಡ ಎಂದು ಹೇಳಿದ್ದಾರೆ.
ಜೀರೋ ಟ್ರಾಫಿಕ್ ಕುರಿತು ಟ್ವೀಟ್ ಮಾಡಿರುವ ಸಿಎಂ
ಭಾನುವಾರ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, " ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೋ ಟ್ರಾಫಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ''. ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಈ ನಡೆ ಕುರಿತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಫೆಸ್‌ಬುಕ್, ಟ್ವೀಟರ್‌ನಲ್ಲಿ ಸಾಕಷ್ಟು ಮಂದಿ ಸಿದ್ದರಾಮಯ್ಯ ಅವರನ್ನು ಪ್ರಶಂಸಿಸಿದ್ದಾರೆ. ಇಂತಹ ಜನ ಪರ ನಿರ್ಧಾರಗಳಿಂದಲೇ ನೀವು ಇಷ್ಟ ಆಗ್ತೀರಾ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.
I have asked Bengaluru City Police Commissioner to take back the 'Zero Traffic' protocol for my vehicular movement.
— Siddaramaiah (@siddaramaiah) May 21, 2023
I have taken the decision after seeing the problems faced by the people travelling along the stretch where there are restrictions due to 'zero traffic.'
Karnataka Chief Minister Siddaramaiah has asked for a 'zero traffic' protocol for his motorcade inside Bengaluru City. The freshly sworn-in chief minister said in a tweet that the decision was taken "after seeing the problems faced by the people travelling along the stretch where there are restrictions due to zero traffic".
10-02-25 10:51 pm
HK News Desk
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 11:09 pm
Mangalore Correspondent
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm