ಬ್ರೇಕಿಂಗ್ ನ್ಯೂಸ್
22-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 22; 'ಏನೇ ಆದ್ರು ನನ್ನ ಫೇವರಿಟ್ RCB ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗಲು ಸಾಧ್ಯವಾಗದಿರುವುದಕ್ಕೆ ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.
ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಡಿ. ಕೆ. ಶಿವಕುಮಾರ್ ಪುತ್ರಿ ಮತ್ತು ಪುತ್ರನ ಜೊತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಣೆ ಮಾಡಿದರು. ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಅವರು ಪೋಸ್ಟ್ ಹಾಕಿದ್ದಾರೆ.
'ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಡಿಸಿಎಂ ಡಿ. ಕೆ.
ಸಿದ್ದರಾಮಯ್ಯಗೂ ಆರ್‌ಸಿಬಿ ನೆಚ್ಚಿನ ತಂಡ;
ಡಿ. ಕೆ. ಶಿವಕುಮಾರ್ ಮಾತ್ರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆರ್‌ಸಿಬಿ ನೆಚ್ಚಿನ ತಂಡ. ಏಪ್ರಿಲ್‌ನಲ್ಲಿ ಚುನಾವಣೆ ಪ್ರಚಾರದ ನಡುವೆಯೂ ಅವರು ಮ್ಯಾಚ್ ನೋಡಲು ತೆರಳಿದ್ದರು. ಅಲ್ಲದೇ 'ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ' ಎಂದು ಟ್ವೀಟ್ ಮಾಡಿದ್ದರು.
'ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್. ಸಿ. ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್‌ಸಿಬಿಗೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಆರ್‌ಸಿಬಿ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದರು.
Karnataka DCM Dk Shivamumar and family visits stadium to watch RCB match, says RCB will win for sure.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm