ಬ್ರೇಕಿಂಗ್ ನ್ಯೂಸ್
24-05-23 04:33 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24 : ಕರ್ನಾಟಕ ರಾಜ್ಯ ವಿಧಾನಸಭೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿ, ಐದು ಬಾರಿಯ ಶಾಸಕರಾಗಿರುವ ಮಂಗಳೂರಿನ ಯುಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿ, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಅನೇಕ ಖಾತೆಗಳನ್ನು ನಿರ್ವಹಿಸಿದ್ದ ಯು.ಟಿ ಖಾದರ್ ಮೊದಲ ಬಾರಿ ಸ್ಪೀಕರ್ ಆಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬಿಎ ಮತ್ತು ಎಲ್ಎಲ್ ಬಿ ವ್ಯಾಸಂಗ ಮಾಡಿರುವ ಯು.ಟಿ. ಅಬ್ದುಲ್ ಖಾದರ್ ಫರೀದ್ ಕರ್ನಾಟಕದ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಅವರ ತಂದೆ ಯು.ಟಿ.ಫರೀದ್ 1972, 1978, 1999 ಮತ್ತು 2004ರಲ್ಲಿ 4 ಬಾರಿ ಮಂಗಳೂರಿನ ಉಳ್ಳಾಲದಲ್ಲಿ ಶಾಸಕರಾಗಿದ್ದರು. ಹೀಗಾಗಿ ಖಾದರ್ ಅವರದು ರಾಜಕೀಯ ಹಿನ್ನಲೆಯ ಕುಟುಂಬ. 2007ರಲ್ಲಿ ತಂದೆಯ ನಿಧನ ಕಾರಣ ಉಪ ಚುನಾವಣೆ ನಡೆದು ಯುಟಿ ಖಾದರ್ ಮೊದಲ ಬಾರಿಗೆ ಶಾಸಕರಾಗಿದ್ದರು. ಆನಂತರ, ಐದು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಳ್ಳಾಲದ ಬೋಳ್ಯಾರಿನ ಸೈಂಟ್ ಜೆರೋಜ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದು ನಂತರ 4ನೇ ತರಗತಿಗೆ ಮಂಗಳೂರಿನ ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗೆ ಸೇರಿ, ಪ್ರೌಢ ಶಿಕ್ಷಣ ಪಡೆದಿದ್ದಾರೆ. ಪದವಿ ಪೂರ್ವ ಶಿಕ್ಷಣ ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ ಮುಗಿಸಿದ್ದು, SDM ಕಾನೂನು ಕಾಲೇಜಿನಲ್ಲಿ ಬಿಎ, ಎಲ್ಎಲ್ ಬಿ ಪದವಿ ಶಿಕ್ಷಣ ಪಡೆದಿದ್ದಾರೆ.
ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ನಗರಾಭಿವೃದ್ಧಿ, ಆರೋಗ್ಯ ಇಲಾಖೆ ಸಚಿವರಾಗಿದ್ದ ಖಾದರ್ ಈ ಬಾರಿ 16ನೇ ವಿಧಾನಸಭೆಯ ನೂತನ ಸ್ವೀಕರ್ ಆಗಿದ್ದು ಬುಧವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದರು. ನಿನ್ನೆಯಷ್ಟೇ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದರು. ಬೇರೆ ಯಾರು ಕೂಡ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸದೇ ಇದ್ದುದರಿಂದ ಅವಿರೋಧ ಆಯ್ಕೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಧಾನಸಭೆ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಖಾದರ್ ಆಗಿದ್ದಾರೆ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಶಾಸಕರಾಗಿದ್ದ ಬಿ. ವೈಕುಂಠ ಬಾಳಿಗಾ 1962 ಮತ್ತು 1967ರಲ್ಲಿ ಸಭಾಧ್ಯಕ್ಷರಾಗಿದ್ದರು.
UT Khader, a former Karnataka minister and five-time MLA, has been unanimously elected as the Speaker of the Legislative Assembly on Wednesday, May 24. Winning from the Mangalore constituency in the 2023 Karnataka Assembly Elections, Khader will become the first Muslim to hold the position of Speaker in the Karnataka Assembly. With no other contenders for the post, Pro-term Speaker RV Deshpande put forth the proposal made by the Chief Minister for a vote, and it was unanimously accepted by the House.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm