ಬ್ರೇಕಿಂಗ್ ನ್ಯೂಸ್
24-05-23 05:58 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್, ”ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ನಿಷೇಧ ಹೇರಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.
”ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದರು.
”ಜನರು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದರು.
ಇನ್ನು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೂಸು ಹುಟ್ಟಿದ ಕೂಡಲೇ ಓಡಬೇಕು, ನಡಿಬೇಕು ಆಡಬೇಕು ಅಂದ್ರೆ ಹೇಗೆ ಆಗುತ್ತಾ?. ಅದಕ್ಕೆ ಸ್ವಲ್ಪ ಸಮಯ ಬೇಕು, ಕುಮಾರಸ್ವಾಮಿ ಅವರು ಸರ್ಕಾರ ನಡೆಸಿದವರು. ಒಂದು ಯೋಜನೆ ಅನುಷ್ಠಾನಕ್ಕೆ ಎಷ್ಟು ಸಮಯ ಬೇಕು ಅಂತ ಅವರಿಗೆ ಗೊತ್ತಿದೆ. ಆರ್ಥಿಕವಾಗಿ ಏನೇನಾಗತ್ತೆ ಅಂತ ನೋಡಬೇಕು. ಅನುಷ್ಠಾನ ವಿಚಾರಕ್ಕೆ ಏನೇನಾಗುತ್ತೆ ನೋಡಬೇಕು. ಗ್ಯಾರಂಟಿ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Will Ban Bajrang Dal and RSS If Peace Is Disturbed by communial violence in karnataka says Minister Priyank Kharge. if the BJP leadership find it unacceptable, they can go to Pakistan."We have promised to turn Karnataka into a paradise.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm