ಬ್ರೇಕಿಂಗ್ ನ್ಯೂಸ್
25-05-23 12:29 pm HK News Desk ಕರ್ನಾಟಕ
ಮೈಸೂರು, ಮೇ. 25: ಮೂರು ತಿಂಗಳ ಹಿಂದೆ ಅಂದರೆ ಕಳೆದ ಫೆಬ್ರವರಿಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ಅವರು ಅಶ್ವತ್ಥ ನಾರಾಯಣ್ ಹೇಳಿಕೆ ನೀಡಿದ ದಿನವೇ ದೂರು ನೀಡಿದ್ದರು. ಆದರೆ, ಆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆಗ ಬಿಜೆಪಿ ಸರ್ಕಾರವಿತ್ತು. ಬುಧವಾರ ಮತ್ತೆ ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಅಶ್ವತ್ಥ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಅವರನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಮಾಜಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 153 (ಗಲಬೆ ಉಂಟು ಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯದ ಸಾತನೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅಶ್ವಥ್ ನಾರಾಯಣ್ , 'ಟಿಪ್ಪುವಿನ ಮಗ ಸಿದ್ದರಾಮಯ್ಯ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಅಥವಾ ಸಾವರ್ಕರ್..? ನಾವು ಟಿಪ್ಪು ಸುಲ್ತಾನ್ ಅನ್ನು ಎಲ್ಲಿಗೆ ಕಳುಹಿಸಬೇಕು..? ಉರಿಗೌಡ ಮತ್ತು ನಂಜೇಗೌಡರು ಏನು ಮಾಡಿದರು..? ಅದೇ ರೀತಿಯಲ್ಲಿ ಅವರನ್ನು ಹೊಡೆದು ಹಾಕಬೇಕು' ಎಂದಿದ್ದರು.
ಇದಕ್ಕೆಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, 'ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಕೊಂದ ರೀತಿಯಲ್ಲಿಯೇ ನನ್ನನ್ನೂ ಸಾಯಿಸಿ ಎಂದು ಮನವಿ ಮಾಡಿದ್ದಾರೆ. ಅಶ್ವಥ್ ನಾರಾಯಣ್, ಜನರನ್ನು ಪ್ರಚೋದಿಸಲು ಏಕೆ ಪ್ರಯತ್ನಿಸುತ್ತಿದ್ದೀರಿ? ನೀವೇ ಬಂದೂಕು ತೆಗೆದುಕೊಳ್ಳಿ. ಈ ಬಗ್ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೌನವಾಗಿದ್ದಾರೆ. ಅಶ್ವಥ್ ನಾರಾಯಣ ಹೇಳಿಕೆಗೆ ಅವರ ಸಮ್ಮತಿ ಇದೆ ಎಂಬುದನ್ನು ಇದು ತೋರಿಸುತ್ತದೆ' ಎಂದು ಹೇಳಿದ್ದರು.
FIR Registered Against Former BJP Minister Ashwath Narayan In Mysuru For His Remarks on SiddaramaiahBreaking News | FIR registered against former BJP Minister Ashwath Narayan in Mysuru over his alleged "finish off.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm