ಬ್ರೇಕಿಂಗ್ ನ್ಯೂಸ್
25-05-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ‘ಕೆರಾಡಿ ಸ್ಟುಡಿಯೋಸ್' ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾಗಿ ತಿಳಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಇದೀಗ ಹೊಸ ಘೋಷಣೆ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Keradi Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.
ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.
ರಿಷಬ್ ಶೆಟ್ಟಿ ಬಹುಮುಖ ಪ್ರತಿಭೆಯಾಗಿ ಸಿನಿಮಾ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದು ಸಿನಿಮಾಗಳ ಪ್ರಚಾರಕ್ಕೆಂದು ಹೊಸ ವೇದಿಕೆ ಕಟ್ಟಿದ್ದಾರೆ. ನೆಚ್ಚಿನ ನಟ ರಿಷಬ್ ಹೊಸ ಕೆಲಸಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.
ಹೊಸ ಹೆಜ್ಜೆ, ಹೊಸ ಕನಸು!#kerady #keradystudios #rishabshettyfilms #moviemarketing #kannadafilmindustry pic.twitter.com/H67tiPQCDE
— Rishab Shetty (@shetty_rishab) May 25, 2023
D Vine star Rishab Shetty has started a new endeavor after the super success of the movie 'Kantara'. Rishabh Shetty has shared about his new step on social media. Rishabh Shetty started a new business in the name of 'Keradi'.Rishabh Shetty, who is known as an actor, director and producer, has now made a new announcement on social media. A film's success requires not only its production but also its promotion.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm