ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್‌ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್‌ಮಾಲ್‌ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm