ಬ್ರೇಕಿಂಗ್ ನ್ಯೂಸ್
26-05-23 09:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಟಾಪಟಿಯ ಬಳಿಕ ಅಂತೂ ಸಚಿವರ ಪಟ್ಟಿ ಅಂತಿಮಗೊಂಡಿದೆ. ದೆಹಲಿಯಲ್ಲಿ ಶುಕ್ರವಾರ ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮನೆಯಲ್ಲಿ ನಡೆಸಿದ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹಿರಿಯ ಶಾಸಕರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದ್ದು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ ಎನ್ನುವ ಮಾಹಿತಿ ದೆಹಲಿ ಮೂಲದಿಂದ ಲಭಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಆಪ್ತರಾಗಿರುವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ತಿನ ನಾಯಕರಾಗಿರುವ ಮತ್ತು ದಕ್ಷಿಣ ಕನ್ನಡ ಮೂಲದ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್, ತುಮಕೂರು ಜಿಲ್ಲೆಯ ಹಿರಿಯ ಶಾಸಕ ಟಿಬಿ ಜಯಚಂದ್ರ, ಮೈಸೂರಿನ ಆರು ಬಾರಿಯ ಶಾಸಕ ತನ್ವೀರ್ ಸೇಠ್, ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಸಿಕ್ಕಿಲ್ಲ. 135 ಶಾಸಕರು ಗೆದ್ದಿರುವುದರಿಂದ ಪರಿಷತ್ತಿನ ಯಾವುದೇ ಸದಸ್ಯನಿಗೂ ಸಚಿವ ಸ್ಥಾನ ನೀಡಿಲ್ಲ ಎನ್ನಲಾಗುತ್ತಿದೆ. ಡಿಕೆಶಿ ಆಪ್ತರೂ ಆಗಿರುವ ಬಿಕೆ ಹರಿಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವ ಸ್ಥಾನ ಖಚಿತ ಎನ್ನಲಾಗಿತ್ತು. ಆದರೆ ಸಿದ್ದರಾಮಯ್ಯ ಜೊತೆಗೆ ವೈಮನಸ್ಸು ಹೊಂದಿರುವುದರಿಂದ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎನ್ನಲಾಗುತ್ತಿದೆ.
ಮೈಸೂರಿನಿಂದ ಸಿದ್ದರಾಮಯ್ಯ ಪರಮಾಪ್ತ ಡಾ.ಎಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ರುದ್ರಪ್ಪ ಲಮಾಣಿ, ಎಂ.ಸಿ.ಸುಧಾಕರ್, ಬೆಳಗಾವಿ ಜಿಲ್ಲೆಯಿಂದ ಲಕ್ಷ್ಮೀ ಹೆಬ್ಬಾಳ್ಕರ್, ಕೋಲಾರದಿಂದ ಬೋಸರಾಜು, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿ. ನಾಗೇಂದ್ರ, ಆರ್.ಬಿ. ತಿಮ್ಮಾಪುರ, ಕೆ.ಎನ್.ರಾಜಣ್ಣ, ಶಿವಾನಂದ ಪಾಟೀಲ್, ಚೆಲುವರಾಯಸ್ವಾಮಿ, ಪುಟ್ಟರಂಗಶೆಟ್ಟಿ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಭಟ್ಕಳದ ಮಂಕಾಳ ವೈದ್ಯ, ಮಧು ಬಂಗಾರಪ್ಪ, ಶಿವರಾಜ ತಂಗಡಗಿ, ಈಶ್ವರ ಖಂಡ್ರೆ, ಕಲಬುರಗಿಯ ರಹೀಂ ಖಾನ್, ಡಾ.ಶರಣ ಪ್ರಕಾಶ್ ಪಾಟೀಲ್, ನರೇಂದ್ರಸ್ವಾಮಿ, ಭೈರತಿ ಸುರೇಶ್ ಸಚಿವ ಸ್ಥಾನ ಗಿಟ್ಟಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಶನಿವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿರುವ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಯಾವೊಬ್ಬ ವ್ಯಕ್ತಿಯನ್ನೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ಈಡಿಗ-ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡಿರುವುದರಿಂದ ಮತ್ತೊಬ್ಬ ವ್ಯಕ್ತಿಗೆ ನಿರಾಕರಿಸಲಾಗಿದೆ. ಇದರಿಂದ ತೀವ್ರ ಸಿಟ್ಟು ಮತ್ತು ಬೇಸರಕ್ಕೆ ಒಳಗಾಗಿರುವ ಬಿಕೆ ಹರಿಪ್ರಸಾದ್ ಪರಿಷತ್ತಿನ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಒಟ್ಟು 24 ಸಚಿವ ಸ್ಥಾನ ಭರ್ತಿಗೊಳಿಸಲು ಅವಕಾಶ ಇತ್ತು. ಒಂದು ಸ್ಥಾನ ಬಾಕಿಯಿರಿಸಿ ಸಿದ್ದರಾಮಯ್ಯ ಸರ್ಕಾರ ಭರ್ಜರಿ ಸಂಪುಟದೊಂದಿಗೆ ಕಾರ್ಯಾರಂಭಕ್ಕೆ ಹೆಜ್ಜೆ ಹಾಕಿದೆ.
Karnataka Cabinet expansion BK Hariprasad, Jayachandra and Deshpande have no Post, 24 Ministers To Take Oath On Saturday. The names have been finalised in the meeting between Mr Siddaramaiah, his deputy DK Shivakumar and Central leaders of the party in Delhi, sources have said. The Chief Minister will meet Rahul Gandhi on Friday for a sign-off.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am