ಬ್ರೇಕಿಂಗ್ ನ್ಯೂಸ್
27-05-23 02:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಕಳೆದ ಶನಿವಾರ, ಮೇ 20 ಕಂಠೀರವ ಸ್ಟೇಡಿಯಂನಲ್ಲಿ 8 ಮಂದಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದಾದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆಯಾಗಿದ್ದು, ಇಂದು, ಮೇ 27 ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿಯನ್ನು ಬೋದಿಸಿದರು.
ಎಚ್.ಕೆ ಪಾಟೀಲ್, ಎನ್ ಚಲುವನಾರಾಯಣ ಸ್ವಾಮಿ, ಕೆ. ವೆಂಕಟೇಶ್, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ತಿಮ್ಮಾಪೂರ್ ರಾಮಪ್ಪ ಬಾಲಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಶಿವರಾಜ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಡಿ. ಸುಧಾಕರ್, ಸಂತೋಷ್ ಲಾಡ್, ಎನ್.ಎಸ್. ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ. ಸುಧಾಕರ್ ಮತ್ತು ಬಿ.ನಾಗೇಂದ್ರ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಡಾ.ಎಚ್. ಸಿ. ಮಹಾದೇವಪ್ಪ ಅವರು ಸತ್ಯ ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕೆ.ಎನ್. ರಾಜಣ್ಣ ಅವರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ವಾಲ್ಮಿಕಿ ಮಹರ್ಷಿ ಹೆಸರಿನಲ್ಲಿ ಪ್ರಮಾಣ ಮಾಡಿದರು. ಶಿವಾನಂದ ಪಾಟೀಲ್ ಅವರು ಬಸವಣ್ಣನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಸವಣ್ಣ, ಶಿವಾಜಿ ಹಾಗೂ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಹೀಂ ಖಾನ್ ಅವರು ಅಲ್ಲಾ ಹೆಸರಿನಲ್ಲಿ ಇಂಗ್ಲಿಷ್ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕೃಷ್ಣ ಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಯಾರ ಹೆಸರನ್ನೂ ಉಲ್ಲೇಖಸದೇ ಶ್ರದ್ಧಾಪೂರ್ವಕವಾಗಿ ದೃಢೀಕರಣ ಮಾಡುತ್ತೇನೆ ಎನ್ನುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ವಾರ ಎಂಟು ಸಚಿವರಿಂದ ಪ್ರಮಾಣ ವಚನ;
ಕಳೆದವಾರ ಅಂದರೆ ಮೇ 20ರ ಶನಿವಾರ ಎಂ. ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಸಿದ್ದರಾಮಯ್ಯ ಮತ್ತು ಡಿಕೆಶಿ ಜತೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಳೆದ ವಾರ ಎಂಟು ಮಂದಿ ಇದೀಗ 24 ಮಂದಿ ಸೇರಿ ಒಟ್ಟು 32 ಸಚಿವರು ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಪುಟವನ್ನು ಸೇರಿದಂತಾಗಿದೆ. ಅಲ್ಲಿಗೆ ಸಿದ್ದು ಸಂಪುಟ ಭರ್ತಿಯಾಗಿದೆ.
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು;
ಈಶ್ವರ್ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ , ಡಾ.ಎಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ್, ಭೈರತಿ ಸುರೇಶ್, ಕೃಷ್ಣ ಬೈರೇಗೌಡ , ರಹೀಂ ಖಾನ್, ಮಧು ಬಂಗಾರಪ್ಪ , ಡಾ.ಎಂ.ಸಿ ಸುಧಾಕರ್, ಎಚ್.ಕೆ. ಪಾಟೀಲ್.
ಲಕ್ಷ್ಮೀ ಹೆಬ್ಬಾಳ್ಕರ್ ಏಕೈಕ ಸಚಿವೆ;
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಮೊದಲ ಬಾರಿ ಸಚಿವೆ ಭಾಗ್ಯ ಸಿಕ್ಕಿದೆ.ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿ ಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
Karnataka got a full cabinet on Saturday, with 24 Congress MLAs taking oath as ministers, a week after chief minister Siddaramaiah, deputy chief minister DK Shivakumar and eight other ministers were sworn in.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm