ಬ್ರೇಕಿಂಗ್ ನ್ಯೂಸ್
28-05-23 02:47 pm HK News Desk ಕರ್ನಾಟಕ
ರಾಯಚೂರು, ಮೇ 28 : ಜಿಲ್ಲೆಯ ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ
ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ರಾಯಚುರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಗು ನಿನ್ನೆ ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲುಷಿತ ನೀರು ಸೇವಿಸಿದ ಹುನಮಂತಪ್ಪ ಹೆಸರಿನ ಮೂರು ವರ್ಷದ ಮಗು ಎರಡು ದಿನಗಳಿಂದ ಅಸ್ವಸ್ಥಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ರೇಕಲಮರಡಿ ಗ್ರಾಮಕ್ಕೆ ಪೂರೈಕೆಯಾಗುವ ನೀರಿನ ಟ್ಯಾಂಕ್ ಸುಮಾರು ವರ್ಷಗಳಿಂದ ಸ್ವಚ್ಚಗೊಳಿಸದೆ ಇರುವುದರಿಂದ ಟ್ಯಾಂಕರ್ ನಲ್ಲಿ ಹುಳುಗಳು ಕಾಣಿಸಿಕೊಂಡಿವೆ. ಅಲ್ಲದೇ ಪೈಪ್ ಲೈನ್ ಒಡೆದು ಕಲುಷಿತ ನೀರು ಪೂರೈಕೆಯಾಗಿದೆ. ಈ ನೀರನ್ನು ಕುಡಿದ ಗ್ರಾಮಸ್ಥರಿಗೆ ವಾಂತಿ ಬೇದಿ ಉಂಟಾಗಿದೆ.
ನೀರಿನ ಟ್ಯಾಂಕ್ ಮತ್ತು ನಗರ ಸ್ವಚ್ಚಗೊಳಿಸುವಂತೆ ಅನೇಕ ಬಾರಿ ಮನವಿ ಮಾಡಿದರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಪಿಡಿಓ ರೇಣುಕಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆಗೆ ಪಿಡಿಓ ನಿರ್ಲಕ್ಷ್ಯವೇ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದೇವದುರ್ಗ ಇಒ ನೀಡಿದ ವರದಿ ಆಧರಿಸಿ ಪಿಡಿಓ ರೇಣುಕಾ ಅವರನ್ನು ಜಿಲ್ಲಾ ಪಂಚಾಯತ ಸಿಇಒ ಶಶಿಧರ ಕುರೇರ್ ಅಮಾನತು ಮಾಡಿ ಆದೇಶ ಹೋರಡಿಸಿದ್ದಾರೆ.
ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳು ;
* ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
* ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
* ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
* ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
* ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.
* ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.
ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ @siddaramaiah ಅವರು ಆದೇಶಿಸಿದ್ದಾರೆ.
— CM of Karnataka (@CMofKarnataka) May 28, 2023
ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ…
One Dead, 30 Others Sick After Drinking Contaminated Water In raichur District, cm siddaramaiah slams officers via phone call. The locals claimed that the infant from the village admitted to the hospital had died due to vomiting and loose motion. The samples of drinking water from the village have been sent to the lab. Prima facie, it is established that the villagers fell ill after consuming the water, he said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm