ಬ್ರೇಕಿಂಗ್ ನ್ಯೂಸ್
28-05-23 05:42 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 28: ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಈಗ ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಈ ಸ್ಥಿತಿಗೆ ತಂದವರು ಈಗ ಎಲ್ಲಿ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನೂ ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಸೇರುವ ಮುನ್ನ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಬಯಕೆ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಶೆಟ್ಟರ ತಿಳಿಸಿದರು.
ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.
ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಹೇಳಿದ ಅವರು, ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ ಎಂದರು.
Where are those leaders who have brought BJP to such a pathetic condition questions Jagadish Shettar. Addressing reporters in Hubballi on Sunday, Shettar stated that he had joined the Congress unconditionally and did not seek any ministerial position. However, the people expressed their desire for him to become a minister, but with only 34 available berths, it was not possible.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm