ಬ್ರೇಕಿಂಗ್ ನ್ಯೂಸ್
29-05-23 06:29 pm HK News Desk ಕರ್ನಾಟಕ
ಮೈಸೂರು, ಮೇ 29: ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಮೃತ ಹತ್ತು ಜನರು ಬಳ್ಳಾರಿ ತಾಲೂಕಿನ ಸಂಗನಕಲ್ ಗ್ರಾಮದವರು ತಿಳಿದು ಬಂದಿದೆ. ಒಂದೇ ಕುಟುಂಬದ ಸಂದೀಪ್ (23), ಅವರ ತಂದೆ ಕೊಟ್ರೇಶ್(45),ತಾಯಿ ಸುಜಾತಾ(35) ,ಎರಡನೇ ಕುಟುಂಬದ ಮಂಜುನಾಥ (40) ಪತ್ನಿ ಪೂರ್ಣಿಮಾ(30), ಮಕ್ಕಳಾದ ಕಾರ್ತಿಕ್ (11), ಪವನ್ (7) ಮೂರನೇ ಕುಟುಂಬ ತಾಯಿ ಗಾಯತ್ರಿ(30) ಮಗಳು ಶ್ರಾವ್ಯ(3) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜನಾರ್ದನ ಅವರ ಮಗ ಪುನೀತ್ ಮತ್ತು ಸಂಗನಕಲ್ ಗ್ರಾಮದ ಶಶಿಕುಮಾರ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.
ಬಳ್ಳಾರಿಯಿಂದ ಮೈಸೂರಿಗೆ ರೈಲಿನಲ್ಲಿ ತೆರಳಿ, ಅಲ್ಲಿ ವಾಹನ ಬಾಡಿಗೆ ಪಡೆದು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ;
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
— CM of Karnataka (@CMofKarnataka) May 29, 2023
ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ… pic.twitter.com/xSUD80kNro
At least 9 people, including three children, were killed in an accident between a private bus and a car near Tirumakudalu-Narasipura on Monday, said Mysuru SP Seema Latkar. Karnataka CM Siddaramaiah has announced an ex-gratia of Rs 2 lakh each to the families of the deceased from the CM Relief Fund. He has also directed the concerned officials to ensure proper treatment for the injured.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am