ಬ್ರೇಕಿಂಗ್ ನ್ಯೂಸ್
30-05-23 12:59 pm Bangalore Correspondent ಕರ್ನಾಟಕ
ಬೆಂಗಳೂರು, ಮೇ30: ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ), ಶರತ್ ಚಂದ್ರ - ಎಡಿಜಿಪಿ ಗುಪ್ತಚರಕ್ಕೆ ನೇಮಕ ಮಾಡಲಾಗಿದೆ.
ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ದಯಾನಂದ ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ಮೂಲದವರಾಗಿದ್ದಾರೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ತವರು ಜಿಲ್ಲೆ ದಯಾನಂದ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಬಿ.ದಯಾನಂದ್ (B Dayanand) ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿತ್ತು. ಹೀಗಾಗಿ ಕನ್ನಡಿದ ಐಪಿಎಸ್ ಅಧಿಕಾರಿಗೆ ಈ ಬಾರಿ ಬೆಂಗಳೂರು ಪೊಲೀಸ್ ಕಮಿಷನರ್ (Police commissioner) ಹುದ್ದೆ ಒಲಿಯುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕನ್ನಡಿಗ ದಯಾನಂದ ಅವರಿಗೆ ಬೆಂಗಳೂರು ಕಮಿಷನರ್ ಹುದ್ದೆ ಒಲಿದುಬಂದಿದೆ.
Dayananda appointed as new Police Commissioner of Bangalore, Pratap Reddy transfered as DGP internal security. In a big reshuffle in the police department, the Karnataka government on Tuesday appointed IPS officer B Dayananda as the new Bengaluru Police Commissioner replacing Pratap Reddy among other changes. Dayananda is a 1994 batch IPS officer who will be assuming charge as the new Bengaluru City Police Commissioner.
11-02-25 03:40 pm
HK News Desk
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 04:50 pm
Mangalore Correspondent
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm