ಬ್ರೇಕಿಂಗ್ ನ್ಯೂಸ್
30-05-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ಸರಕಾರಿ ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಈ ಭರವಸೆಯನ್ನು ಕಾಂಗ್ರೆಸ್ ಸರಕಾರ ಈಡೇರಿಸುವುದಾಗಿ ಹೇಳಿದೆ. ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ ಕಾರ್ಡ್ ಬೇಕು ಅನ್ನಲ್ಲ ಎಂದಿದ್ದಾರೆ. ಎಲ್ಲಾ ಮಹಿಳೆಯರಿಗೂ ಬಸ್‌ನಲ್ಲಿ ಉಚಿತ ಪ್ರಯಾಣವಿದ್ದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿಗಳು, ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲ ನಿಗಮಗಳು ಒಂದಷ್ಟು ಗೈಡ್ಲೈನ್ಸ್ ನೀಡಿದ್ದಾರೆ. ಅವೆಲ್ಲವನ್ನೂ ಜೂನ್ 1ರಂದು ನಡೆಯುವ ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಹಿನ್ನೆಲೆ ಇಂದು ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಾಲ್ಕೂ ನಿಗಮಗಳ ಎಂಡಿಗಳ ಜೊತೆ ಮಾತುಕತೆ ನಡೆಸಿದರು. ಸಭೆಯಲ್ಲಿ BMTC, KSRTC, NWKRTC, KKRTC ಎಂಡಿಗಳು ಭಾಗಿಯಾಗಿದ್ದರು. ನಿಗಮಗಳಲ್ಲಿ ಪ್ರತಿನಿತ್ಯ ಸಂಚರಿಸುತ್ತಿರುವ ಮಹಿಳೆಯರ ಸಂಖ್ಯೆ, ಅವರು ಕ್ರಮಿಸುತ್ತಿರೋ ಸರಾಸರಿ ಕಿಲೋಮೀಟರ್‌ಗಳ ಪ್ರಯಾಣ, ನಿಗಮಗಳು ಪ್ರತಿನಿತ್ಯ ದುಡಿಯುತ್ತಿರೋ ಒಟ್ಟು ಮೊತ್ತವೆಷ್ಟು? ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆದಿದೆ.
ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡುತ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ N.V. ಪ್ರಸಾದ್ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಎಂಡಿ ಜಿ.ಸತ್ಯವತಿ, NWRTC ಎಂಡಿ ಭರತ್, KKRTC ಎಂಡಿ ರಾಚಪ್ಪ ಮತ್ತು ಇತರ ಅಧಿಕಾರಿಗಳು ಭಾಗಿಯಾಗಿದ್ದರು.
Free ticket for women across Karnataka in KSRTC says Minister Ramalinga reddy, No BPL card required, free for all including college students. Karnataka`s Minister for Transport Ramalinga Reddy held a high-level meeting on Monday to take a call on the implementation of free bus travel for women, one the five major poll promises of the Congress.
11-02-25 03:40 pm
HK News Desk
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 04:50 pm
Mangalore Correspondent
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm