ಬ್ರೇಕಿಂಗ್ ನ್ಯೂಸ್
30-05-23 07:16 pm HK News Desk ಕರ್ನಾಟಕ
ಬಳ್ಳಾರಿ, ಮೇ, 30: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಸಂಗನಕಲ್ಲು ಗ್ರಾಮದ 9 ಜನರ ಮೃತದೇಹಗಳನ್ನು ಮಂಗಳವಾರ ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಯಿತು.
ಸಂಗನಕಲ್ಲು ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳಿಂದ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು. ಮೈಸೂರಿನಿಂದ ನಾಲ್ಕು ಆಂಬ್ಯುಲೆನ್ಸ್‌ಗಳಲ್ಲಿ 9 ಜನರ ಮೃತದೇಹಗಳನ್ನು ತರಲಾಯಿತು. ಮೃತದೇಹಗಳನ್ನು ಕೆಲಹೊತ್ತು ಮನೆ ಅಂಗಳದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಈ ವೇಳೆ ಕೆಲವರು ಹೂಮಾಲೆ ಹಾಕಿ ನಮಸ್ಕರಿಸಿ ಅಂತಿಮ ದರ್ಶನ ಪಡೆದರು.
ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅದೇ ಆಂಬ್ಯುಲೆನ್ಸ್‌ಗಳಲ್ಲಿ ಮೃತದೇಹಗಳನ್ನು ಸಮೀಪದ ವೀರಶೈವ ರುದ್ರಭೂಮಿಗೆ ತಂದು ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕೊನೆಗೆ ಸಾರ್ವಜನಿಕರು ಮಣ್ಣು ನೀಡಿದ ಬಳಿಕ ಜೆಸಿಬಿ ಯಂತ್ರದಿಂದ ಕುಣಿಗಳನ್ನು ಮುಚ್ಚಲಾಯಿತು.
ಸ್ಥಳಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು, ಸಚಿವ ಬಿ.ನಾಗೇಂದ್ರ ಅವರ ಸಹೋದರ ಬಿ.ವೆಂಕಟೇಶ್ ಪ್ರಸಾದ್, ಡಿಸಿ ಪವನ್ ಕುಮಾರ್ ಮಾಲಪಾಟಿ, ಎಡಿಸಿ ಮೊಹಮ್ಮದ್ ಝುಬೇರಾ, ಡಿಹೆಚ್ಒ ಹೆಚ್.ಎಲ್.ಜನಾರ್ಧನ ಸೇರಿ ಹಲವರು ಸ್ಥಳದಲ್ಲೇ ಇದ್ದು, ಅಂತ್ಯಕ್ರಿಯೆ ನೆರವೇರಿಸಲು ಅನುವು ಮಾಡಿಕೊಟ್ಟರು.
ಇನ್ನು ರಾಜ್ಯ ಸರ್ಕಾರ ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರದಿಂದ ಕೂಡ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಎರಡು ಲಕ್ಷದ ಬದಲಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಅದೇ ರೀತಿ ಈಗಿನ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡುವಂತೆ ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು.
ಈ ವೇಳೆ ಡಿಸಿ ಪವನ್ ಕುಮಾರ್ ಮಾಲಪಾಟಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಘೋಷಿಸಿರುವ ಪರಿಹಾರ ವಿತರಿಸಲು ಮೃತರಿಗೆ ಸಂಬಂಧಪಟ್ಟವರ ಬ್ಯಾಂಕ್ ಅಕೌಂಟ್ ಮಾಹಿತಿ ನೀಡುವಂತೆ ಸಿಎಂ ಕಚೇರಿಯಿಂದ ಹೇಳಿದ್ದಾರೆ. ಈಗಾಗಲೇ ಎಡಿಸಿ ಬ್ಯಾಂಕ್ ಅಕೌಂಟ್ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಇನ್ನೂ ಎರಡು ದಿನದಲ್ಲಿ ಸಿಎಂ ಪರಿಹಾರ ಅವರ ಅಕೌಂಟ್‌ಗೆ ಜಮಾ ಆಗಲಿದೆ ಎಂದು ಹೇಳಿದರು.
ಇನ್ನು ಮೂವರು ಗಾಯಾಳುಗಳು ಮೈಸೂರು ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಪೈಕಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ನಮ್ಮ ಡಿಹೆಚ್‌ಒ ಅವರು ಆಸ್ಪತ್ರೆಯೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ನರೇಂದ್ರ ಮೋದಿ ;
ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬದವರು ಹಾಗೂ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ.
ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ನರೇಂದ್ರ ಮೋದಿ ಘೋಷಿಸಿದ್ದಾರೆ.
Prime Minister Narendra Modi on Monday expressed grief over the loss of lives in the Mysuru road accident in Karnataka and announced an ex-gratia of Rs 2 lakh each for the next of kin of the deceased and Rs 50 thousand for people who sustained injuries. Prime Minister`s Office in a tweet said, "Deeply saddened to by the tragic accident in Mysuru, Karnataka. My thoughts are with the families who have lost their loved ones. Praying for the speedy recovery of those injured
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:00 pm
HK News Desk
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am