ಬ್ರೇಕಿಂಗ್ ನ್ಯೂಸ್
30-05-23 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ನೀರಾವರಿ ಇಲಾಖೆಯ ಸಭೆಯನ್ನು ಕರೆದು ಮೇಕೆದಾಟು ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದಿದೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಈ ಯೋಜನೆಗೆ ರೂ. 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. 'ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ' ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅವಕಾಶ ನೀಡಲಿದೆ.
67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್‌ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್‌ವೆಲ್- ಕಮ್- ಪಂಪ್‌ಹೌಸ್‌ಗಳ ನಿರ್ಮಾಣ ಯೋಜನೆಯ ಪ್ರಮುಖ ಅಂಶಗಳಾಗಿವೆ. ಯೋಜನೆಗೆ ಒಟ್ಟು 12,979 ಎಕರೆ ಭೂಮಿ ಅಗತ್ಯವಿದ್ದರೆ, ಇದರಲ್ಲಿ 12,345.4 ಎಕರೆ ಮುಳುಗಡೆಯಾಗಲಿದೆ. 500 ಎಕರೆ ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲಾಗುತ್ತದೆ. ನೀರು ಪಾಲಾಗುವ ಉಳಿದ ಜಮೀನು ಪರಿಸರ ಸೂಕ್ಷ್ಮ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಸುತ್ತಮುತ್ತಲಿನ ಅರಣ್ಯಗಳಿಗೆ ಸೇರಿದೆ.
ವನ್ಯಜೀವಿಗಳ ಆವಾಸಸ್ಥಾನವು ಕುಗ್ಗುತ್ತಿರುವ ಸಮಯದಲ್ಲಿ ಸಂರಕ್ಷಿತ ಪ್ರದೇಶದ ದೊಡ್ಡ ಪ್ರದೇಶಗಳನ್ನು ಮುಳುಗಿಸುವುದು ವನ್ಯಜೀವಿ ಸಂಕುಲಕ್ಕೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.
The Mekedatu project, one of the first issues the Congress raised to garner support for the elections, is back in the spotlight with Deputy Chief Minister D K Shivakumar, who holds the Water Resources portfolio, calling a meeting of the irrigation department on Tuesday.
11-02-25 03:40 pm
HK News Desk
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 04:50 pm
Mangalore Correspondent
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm