ಬ್ರೇಕಿಂಗ್ ನ್ಯೂಸ್
01-06-23 04:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್ಐ ನೇಮಕಾತಿ ಅಕ್ರಮದ ಸಂಪೂರ್ಣ ಮರು ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆಗಿರುವ ಪ್ರಕರಣದ ಸಂಪೂರ್ಣ ತನಿಖೆಗೆ ಸಜ್ಜಾಗಿರುವ ಸರ್ಕಾರ, ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ನ್ಯಾಯಯುತವಾಗಿ ಪರೀಕ್ಷೆ ಬರೆದು ತೇರ್ಗಡೆಯಾದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಮನವಿ ಸಲ್ಲಿಸುವ ವಿಚಾರವಾಗಿ ಈಗಾಗಲೇ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಜೊತೆ ಗೃಹಸಚಿವ ಡಾ. ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮುಂದಿನ ಸೋಮವಾರ ಮತ್ತೊಮ್ಮೆ ಎಜಿ ಜೊತೆ ಪರಮೇಶ್ವರ್ ಮಾತುಕತೆ ನಡೆಸಲಿದ್ದಾರೆ. ತನಿಖೆಗೆ ತೊಡಕಿರುವ ಕಾನೂನಾತ್ಮಕ ವಿಚಾರಗಳ ಕುರಿತು ಮಾತುಕತೆ ನಡೆಯಲಿದೆ. ಎಜಿ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಪಿಎಸ್ಐ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಈ ಸಂಬಂಧ ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರು ಚರ್ಚೆ ನಡೆಸಲಿದ್ದಾರೆ. ತನಿಖೆಯೊಂದಿಗೆ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ.
ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಆಮೂಲಕ ಸಂಪೂರ್ಣ ಇಲಾಖೆಗೆ ಸರ್ಜರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
The Congress government in Karnataka has initiated a thorough re-investigation into the alleged irregularities in the recruitment of PSI during the tenure of the previous government. The government, which is gearing up for a thorough probe into the alleged irregularities in the recruitment of 545 PSI posts, is all set to approach the High Court seeking to vacate the stay on the probe. The government has assured that injustice will not be done to those who have cleared the exam in a fair manner.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm