ಸರ್ಕಾರಿ ಬಸ್ಸಲ್ಲಿ ಉಚಿತ ಪ್ರಯಾಣಕ್ಕೂ ಟಿಕೆಟ್ ಪಡೆಯಲೇಬೇಕು ಮಹಿಳೆಯರು ! ಜೂನ್ 11ರಂದು ಸಿಎಂ ಸಿದ್ದರಾಮಯ್ಯ ಚಾಲನೆ 

04-06-23 03:40 pm       Bangalore Correspondent   ಕರ್ನಾಟಕ

ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. 

ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. 

Karnataka's Congress regime announces free bus travel for women from June  11, free power supply, but riders apply - The Economic Times

Relief as Cong pulls Ramalinga Reddy back | Deccan Herald

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.  ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ. 

ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.   

ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.

Free bus travel for women in karnataka, women should carry ticket compulsory.