ಬ್ರೇಕಿಂಗ್ ನ್ಯೂಸ್
05-06-23 12:49 pm Bangalore Correspondent ಕರ್ನಾಟಕ
ಬೆಂಗಳೂರು, ಜೂ. 5: ನೂತನ ಸಿಎಂ ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ಬಗ್ಗೆ ಅವಾಚ್ಯವಾಗಿ ನಿಂದಿಸಿದ ವ್ಯಕ್ತಿಯೊಬ್ಬನನ್ನು ಹಿಡಿದು ಅಭಿಮಾನಿಗಳು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಪಿ ಅಗ್ರಹಾರದಲ್ಲಿ ಈ ಘಟನೆ ನಡೆದಿದ್ದು, ಸಿದ್ದರಾಮಯ್ಯ ಬಗ್ಗೆ ಹಾಕಲಾಗಿದ್ದ ಬ್ಯಾನರ್ ಅನ್ನು ನೋಡಿಕೊಂಡು ಆತ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ.
ಇದನ್ನು ಅಲ್ಲೇ ಇದ್ದ ಸಾರ್ವಜನಿಕರು ನೋಡಿದ್ದು, ಕೂಡಲೇ ಆತನನ್ನು ಹಿಡಿದ ಜನರು ಯಾಕೆ ನಿಂದನೆ ಮಾಡುತ್ತೀಯಾ ಎಂದು ಪ್ರಶ್ನಿಸಿದ್ದಾರೆ.
ಆತ ಸರಿಯಾದ ಉತ್ತರ ಕೊಡದೇ ಇದ್ದಾಗ ಕಪಾಳ ಮೋಕ್ಷ ಮಾಡಿದ್ದಲ್ಲದೇ, ಸಿದ್ದರಾಮಯ್ಯ ಅವರ ಬ್ಯಾನರ್ ಮುಂದೆ ಎಳೆದು ತಂದು ಕ್ಷಮೆ ಕೇಳುವಂತೆ ತಾಕೀತು ಮಾಡಿದ್ದಾರೆ.
ವಿಡಿಯೋದಲ್ಲಿರುವ ವ್ಯಕ್ತಿಯೊಬ್ಬರು ‘ ಈತ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ, ಕನ್ನಡಪರ ಸಂಘಟನೆಗಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡುತ್ತಿದ್ದಾನೆ. ಅವನ್ಯಾವನೋ ಪುನೀತ್ ಕೆರೆಹಳ್ಳಿ ಇವನಿಗೆ ಕಾಸು ಕೊಡ್ತಾನಂತೆ, ಅದಕ್ಕೆ ವಿಡಿಯೋ ಮಾಡಿಕೊಂಡು ನಿಂದನೆ ಮಾಡುತ್ತಿದ್ದಾನೆ’ ಎಂದು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿಗೆ ಮಾತ್ರವಲ್ಲದೇ, ಎಚ್‌ಡಿ ಕುಮಾರಸ್ವಾಮಿ ಮತ್ತು ಕನ್ನಡ ಪರ ಸಂಘಟನೆಗಳ ಬಗ್ಗೆಯೂ ಅಶ್ಲೀಲ ಪದಗಳಿಂದ ನಿಂದಿಸುತ್ತಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ.
ಸಿದ್ದರಾಮಯ್ಯ ಅವರ ಬ್ಯಾನರ್ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯನ್ನು ಪ್ರಶ್ನಿಸಿದಾಗ ಆತ ‘ತನಗೆ ಕುಡಿಯಲು ಹಣ ಬೇಕಿತ್ತು ಅದಕ್ಕೆ ಹೀಗೆ ಮಾಡಿದೆ’ ಎಂದು ಹೇಳಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಪಾಳ ಮೋಕ್ಷ ಬಗ್ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.
A man was forced to apologise to the poster of CM of #Karnataka after he allegedly abused the CM and called him Siddaramullah Khan. Supporters of CM made him to apologise to the poster of CM. pic.twitter.com/gVdrtMY4ij
— Imran Khan (@KeypadGuerilla) June 5, 2023
Siddaramiah fans thrash man for using offensive language seeing his banner in Bangalore. Pulls him to the banner demands to plead sorry by kneeling down. The video of this has gone viral on social media.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm