ಬ್ರೇಕಿಂಗ್ ನ್ಯೂಸ್
06-06-23 11:25 am HK News Desk ಕರ್ನಾಟಕ
ಯಾದಗಿರಿ, ಜೂನ್ 6: ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೂಸರ್‌ನಲ್ಲಿದ್ದ ಜನರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಳಿಚಕ್ರ ಬಳಿ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಐವರು ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದೆ. ಮೇ 28ರಂದು ಕುಷ್ಟಗಿ ಸಮೀಪದ ಕಲಕೇರಿ ಬಳಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮೇ 29ರಂದು ಮೈಸೂರಿನ ಟಿ ನರಸೀಪುರ ಸಮೀಪದ ಕುರುಬೂರು ಬಳಿ ಭೀಕರ ರಸ್ತೆ ಅಫಘಾತ ಸಂಭವಿಸಿತ್ತು. ಬಸ್‌ಗೆ ಕಾರು ಡಿಕ್ಕಿ ಹೊಡೆದು ಬಳ್ಳಾರಿ ಮೂಲದ 11 ಜನ ಸಾವನ್ನಪ್ಪಿದ್ದರು.
As many as five people, including two children, were killed in a road accident near Balichakra village in Yadgir district in Karnataka on June 6 morning. 13 others were injured in the accident and were rushed to YIMS.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm