ಬ್ರೇಕಿಂಗ್ ನ್ಯೂಸ್
06-06-23 04:29 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರ ವಚನ ಭ್ರಷ್ಟ ಹಾಗೂ ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಆರೋಪ ಮಾಡಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯನ್ನು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಹೊಸ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರಿಸಬೇಕು. ಎಲ್ಲರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ಕೊಡಬೇಕು. ಮತ್ತು ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.
ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಎನ್ ರವಿಕುಮಾರ್, ಕೇಶವ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
The Karnataka BJP on Tuesday staged a massive protest with cows in the city against Minister for Animal Husbandry and Veterinary Services K Venkatesh's 'anti-cow slaughter law' remark. Venkatesh had kicked up a storm by asking "If one can slaughter buffaloes and bulls, what is wrong with slaughtering cows?" BJP workers expressed their outrage at his statement of reconsidering the Anti-Cow Slaughter law, which prescribes stringent ...
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am