ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

06-06-23 07:52 pm       HK News Desk   ಕರ್ನಾಟಕ

ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿ, ಜೂ.06: ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ರಾಜ್ಯದೆಲ್ಲೆಡೆ ಭಾರೀ ಚರ್ಚೆಗಾಗುತ್ತಿದ್ದು, ಈ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲೂ ಮುನ್ನೆಲೆಗೆ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗ್ತಿದೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ನಾಯಕರ ಸಹಮತ ಪಡೆದು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಈ ಬಗ್ಗೆ ಜಿಲ್ಲೆಯ ನಾಯಕರ ಚರ್ಚೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಅವರಿಗೆ ಚುನಾವಣೆಯಲ್ಲಿ ಜನ ಉತ್ತರ ಕೊಟ್ಟು ಸರಿಯಾದ ಪಾಠ ಕಲಿಸಿದ್ದಾರೆ. ನಾವು ಕೊಟ್ಟಂತಹ ಭರವಸೆ ಖಂಡಿತವಾಗಿ ಈಡೇರಿಸುತ್ತೇವೆ ಎಂದು ಸಚಿವರು ಹೇಳಿದರು.

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗೂ ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಕ್ರಮ ಕೈಗೊಳ್ಳಲಾವುದು. ಅಭಿವೃದ್ಧಿ ದೃಷ್ಟಿಯಿಂದ ವಿಭಜನೆ ಆಗಿ ಚಿಕ್ಕೋಡಿ ಜಿಲ್ಲೆಯಾಗಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಆಯ್ಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು ಜು.1 ರಿಂದ 15ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಮೂರ್ನಾಲ್ಕು ಇಲಾಖೆಗಳ ಜೊತೆ ನಾವು ಕೆಲಸ ಮಾಡಬೇಕಾಗುತ್ತೆ.

ಕೇವಲ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಲ್ಲ. ನಮ್ಮ ಇಲಾಖೆ ಸಿಬ್ಬಂದಿ ಜೊತೆ ಕಂದಾಯ ಇಲಾಖೆ, ಆರ್‌ಡಿಪಿಆರ್, ನಗರಾಭಿವೃದ್ಧಿ ಇಲಾಖೆ ಇರಬಹುದು. ಈ ಎಲ್ಲಾ ಇಲಾಖೆ ಒಳಗೊಂಡು ಗೃಹಲಕ್ಷ್ಮೀ ಯೋಜನೆ ಜಾರಿ ತರಬೇಕಾಗುತ್ತದೆ ಎಂದು ತಿಳಿಸಿದರು.

I am against killing of all animals and not just cows says Minister Lakshmi Hebbalkar. Animal Husbandry Minister K Venkatesh first raised the issue and said the anti-cow slaughter legislation needs a relook as it permits slaughtering of buggaloes and oxen but not cows.