ಬ್ರೇಕಿಂಗ್ ನ್ಯೂಸ್
07-06-23 03:17 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಲೋಕಸಭೆ ಚುನಾವಣೆಗೆ ಇನ್ನೇನು 10 ತಿಂಗಳಷ್ಟೇ ಬಾಕಿಯಿದೆ. ರಾಜ್ಯದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್, ಲೋಕಸಭೆ ಸ್ಥಾನಗಳನ್ನೂ ಗೆಲ್ಲಲು ತಯಾರಿ ನಡೆಸಿದೆ. ಈ ನಡುವೆ, ಬಿಜೆಪಿಯಲ್ಲಿ ಹಾಲಿ 25 ಸಂಸದರ ಪೈಕಿ ಅರ್ಧದಷ್ಟು ಮಂದಿಗೆ ಟಿಕೆಟ್ ನಿರಾಕರಣೆ ಆಗಲಿದೆ ಎಂಬ ಸುದ್ದಿ ಹಬ್ಬಿದ್ದು, ಪಕ್ಷದ ನಾಯಕರಲ್ಲಿ ಸಂಚಲನ ಎಬ್ಬಿಸಿದೆ.
ವಯಸ್ಸು, ಅನಾರೋಗ್ಯ, ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ 13 ಸಂಸದರನ್ನು ಬದಲಾವಣೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಅಪಸ್ವರ ಎತ್ತಿದ್ದಾರೆ. ತಾನು ಸೇರಿ 13 ಮಂದಿಯ ವಿರುದ್ಧ ಅಸಮರ್ಥರು ಎಂದು ಅಪಪ್ರಚಾರ ಮಾಡಲಾಗುತ್ತಿದೆ, ವಯಸ್ಸಿನ ಕಾರಣಕ್ಕೆ ಸೀಟು ನಿರಾಕರಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರ ಒಳಗಿನ ಶೀತಲ ಸಮರವನ್ನು ಮುನ್ನೆಲೆಗೆ ತಂದಿದ್ದಾರೆ.
ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ ಪ್ರಸಾದ್, ತುಮಕೂರು ಸಂಸದ ಜಿ.ಎಸ್.ಬಸವರಾಜು, ಹಾವೇರಿ ಸಂಸದ ಶಿವಕುಮಾರ್ ಉದಾಸಿ ವಯಸ್ಸಿನ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಬಿಎನ್ ಬಚ್ಚೇಗೌಡ ಮತ್ತು ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ನಿರಾಕರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ ಕುಮಾರ್ ಹೆಗಡೆ ಅನಾರೋಗ್ಯ ಕಾರಣ ಮುಂದಿಟ್ಟು ಸ್ಪರ್ಧೆಯಿಂದ ದೂರ ಸರಿದಿದ್ದಾರೆ ಎನ್ನುವ ಮಾಹಿತಿಗಳಿವೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಡಿವಿ ಸದಾನಂದ ಗೌಡ ಅವರನ್ನು ಬದಲಿಸಿ ಮತ್ತೊಬ್ಬರಿಗೆ ಅವಕಾಶ ನೀಡಬೇಕೆಂಬ ಕೂಗು ಇರುವುದರಿಂದ ಅವರನ್ನು ಬದಲಿಸುತ್ತಾರೆ ಎನ್ನಲಾಗುತ್ತಿದೆ. ವಿಜಯಪುರ ಕ್ಷೇತ್ರದ ಸಂಸದ ರಮೇಶ್ ಜಿಗಜಿಣಗಿ, ಬಳ್ಳಾರಿಯ ದೇವೇಂದ್ರಪ್ಪ, ಬಾಗಲಕೋಟೆಯ ಪಿಸಿ ಗದ್ದಿಗೌಡರ್ ಪಕ್ಷ ಸಂಘಟನೆಯಿಂದ ದೂರವಿದ್ದು, ಆ ಕಾರಣಕ್ಕೆ ಟಿಕೆಟ್ ನಿರಾಕರಣೆ ಎಂಬ ಸಮರ್ಥನೆ ಕೇಳಿಬರುತ್ತಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಈ ಬಾರಿ ವಿಧಾನಸಭೆಗೆ ಸ್ಪರ್ಧಿಸಲು ಒಲವು ತೋರಿದ್ದರು. ಕೊನೆಯ ಕ್ಷಣದಲ್ಲಿ ಅವರ ಸೊಸೆಗೆ ಟಿಕೆಟ್ ನೀಡಲಾಗಿತ್ತು. ಅದೇ ಹಿನ್ನೆಲೆಯಲ್ಲಿ ಕರಡಿ ಸಂಗಣ್ಣ ಅವರನ್ನು ಬದಲಿಸುತ್ತಾರೆ ಎನ್ನುವ ಅಭಿಪ್ರಾಯಗಳಿವೆ.
ಬೆಳಗಾವಿ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಮರು ಆಯ್ಕೆ ಸವಾಲಾಗಬಹುದು ಎನ್ನುವ ಕಾರಣಕ್ಕೆ ಅವರನ್ನು ಬದಲಿಸಬೇಕೆಂಬ ಒತ್ತಡಗಳಿವೆ. ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಕಾರ್ಯಕರ್ತರ ಕಡೆಯಿಂದಲೇ ಭಾರೀ ವಿರೋಧ ವ್ಯಕ್ತವಾಗಿರುವುದು ಟಿಕೆಟ್ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ. ಸದ್ಯಕ್ಕೆ ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕತ್ವ ಬದಲಾವಣೆ ಅಥವಾ ಸೋಲಿನ ಬಗ್ಗೆ ಪರಾಮರ್ಶೆ ಮಾಡುವುದಕ್ಕೂ ಮುಂದಾಗಿಲ್ಲ. ಇದರ ನಡುವೆಯೇ 13 ಸಂಸದರು ಅಸಮರ್ಥರು ಅನ್ನುವ ಅಭಿಪ್ರಾಯ ಕೇಳಿಬರುತ್ತಿದ್ದು, ಆ ಕಾರಣಕ್ಕೆ ಅವರನ್ನು ಬದಲಿಸಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನುವ ವಿಚಾರ ಪಕ್ಷದ ನಾಯಕರಲ್ಲಿ ಚರ್ಚೆಗೀಡಾಗಿದೆ.
The Lok Sabha elections are just 10 months away. The Congress, which came to power in the state, is also gearing up to win lok sabha seats. Meanwhile, news has spread that half of the 25 sitting MPs in the BJP will be denied tickets, triggering a stir among party leaders.
11-02-25 10:57 pm
HK News Desk
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm