ಬ್ರೇಕಿಂಗ್ ನ್ಯೂಸ್
08-06-23 12:43 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 08: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ 1994 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಿಸಲಾಗಿದೆ.
ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇದಲ್ಲದೆ, ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
11 ಐಎಎಸ್ ಅಧಿಕಾರಿಗಳ ವರ್ಗಾವಣೆ ;
ಎರಡು ದಿನಗಳ ಹಿಂದೆಯಷ್ಟೇ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಮತ್ತು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ. ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರವಿಶಂಕರ್ ಅವರನ್ನು ಮುಕ್ತಿಗೊಳಿಸಲಾಗಿದೆ.
Law and order ADGP Alok Kumar transferred as ADGP Traffic, Hitendra appointed as new ADGP law and order for Karnataka. Hitendra is new Additional Director General of Police (ADGP), Law and Order. Alok Kumar who was serving as ADGP, Law and Order, has been transferred and posted as ADGP, Traffic and Road Safety, Bengaluru, in the upgraded vacant post. Hitendra was serving as ADGP, Crime and Technical Services, Bengaluru.
11-02-25 10:57 pm
HK News Desk
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm