ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆ ಕೊಟ್ಟಿಲ್ಲ ; ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ, ಗೃಹ ಸಚಿವ ವಾರ್ನಿಂಗ್ 

08-06-23 06:24 pm       Bangalore Correspondent   ಕರ್ನಾಟಕ

ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ

ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.

No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.