ಬ್ರೇಕಿಂಗ್ ನ್ಯೂಸ್
08-06-23 09:12 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 8: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಾದ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಆತ್ಮಾವಲೋಕನ ಸಭೆ ನಡೆಸಿದ್ದು, ತಮ್ಮ ಸೋಲಿನ ಬಗ್ಗೆ ಸೋತ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಉಪಸ್ಥಿತರಿದ್ದರು. ಉಳಿದಂತೆ ಸಭೆಯಲ್ಲಿ ಗೆದ್ದ ಶಾಸಕರು, ಸೋತ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಸೋತ ಅಭ್ಯರ್ಥಿಗಳಲ್ಲಿ ಹೆಚ್ಚಿನವರಿಗೆ ನಾಯಕರು, ಸಚಿವರಾಗಿದ್ದವರ ಬಗ್ಗೆ ಅಸಮಾಧಾನಗಳಿದ್ದವು. ಹೀಗಾಗಿ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಿಲ್ಲ.
ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಚುನಾವಣೆ ಉಸ್ತುವಾರಿ ವಹಿಸಿದ್ದ ರಾಜ್ಯ ನಾಯಕರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು. ನಾವು ಯಡಿಯೂರಪ್ಪ ನಂಬಿಕೊಂಡು ಪಕ್ಷಕ್ಕೆ ಬಂದಿದ್ದೆವು. ಆದರೆ ಇಲ್ಲಿ ನೋಡಿದರೆ, ಸ್ಥಿತಿ ಬೇರೆಯೇ ಇದೆ. ನಾನು ಕಾಂಗ್ರೆಸ್ ನಲ್ಲಿದ್ದಾಗ ಎರಡು ಬಾರಿ ಗೆದ್ದಿದ್ದೆ. ಬಿಜೆಪಿ ಬಂದ ಬಳಿಕ ಎರಡು ಬಾರಿ ಸೋತೆ. ಇದು ಯಾಕಾಯ್ತು ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಕೆಲವು ಸೋತ ಅಭ್ಯರ್ಥಿಗಳು ಮಾತನಾಡಿ, ಕಾರ್ಯಕರ್ತರನ್ನು ಕಡೆಗಣಿಸಿದ್ದೇ ಸೋಲಿಗೆ ಕಾರಣವಾಯ್ತು. ಅಧಿಕಾರದಲ್ಲಿದ್ದಾಗ ಕಾರ್ಯಕರ್ತನ ಕಡೆ ನೋಡಲೇ ಇಲ್ಲ. ಚುನಾವಣೆ ಬಂದಾಗ ಕಾರ್ಯಕರ್ತ ಬೇಕಾಯ್ತು. ನಾಯಕರ ಈ ರೀತಿಯ ಇಬ್ಬಂದಿತನ ಸೋಲಿಗೆ ಕಾರಣವಾಯ್ತು. ಸಚಿವರಾಗಿದ್ದವರು ಕೂಡ ಕಾರ್ಯಕರ್ತನ ಬೇಡಿಕೆಗೆ ಸ್ಪಂದಿಸಲಿಲ್ಲ ಎಂದು ನೋವು ಹೇಳಿಕೊಂಡರು. ಯಡಿಯೂರಪ್ಪ ಮಾತನಾಡಿ, ಸೋಲಾಯ್ತು ಎಂದು ಎದೆಗುಂದುವ ಅಗತ್ಯವಿಲ್ಲ. ನಾನು ಎರಡು ಸೀಟು ಇದ್ದಾಗ ಪಕ್ಷ ಕಟ್ಟಿದ್ದೇನೆ. ಇವತ್ತು ಅಧಿಕಾರ ಹಿಡಿಯುವಷ್ಟರ ಮಟ್ಟಿಗೆ ಪಕ್ಷ ಬೆಳೆದು ಬಂದಿದೆ. ಕಾರ್ಯಕರ್ತರ ಪಡೆಯೊಂದಿಗೆ ಮುನ್ನುಗ್ಗಬೇಕು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ ಎಂದು ಕರೆ ನೀಡಿದರು.
ಮೇ 13ರಂದು ಫಲಿತಾಂಶ ಬಂದ ಬಳಿಕ ಬಿಜೆಪಿ ನಾಯಕರು ಹೀನಾಯ ಸೋಲಿನಿಂದ ಮೌನಕ್ಕೆ ಶರಣಾಗಿದ್ದರು. ಸೋಲಿನ ಬಗ್ಗೆ ಪರಾಮರ್ಶೆ ನಡೆಸುವುದಕ್ಕೂ ಹೋಗಿರಲಿಲ್ಲ. ಜೆಡಿಎಸ್ ನಾಯಕರು ಸೋಲಿನ ಬಗ್ಗೆ ಎರಡೆರಡು ಸಭೆ ನಡೆಸಿದ್ದಲ್ಲದೆ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೋಲಿನ ಹೊಣೆ ಹೊತ್ತು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಬಿಜೆಪಿ ಕಾರ್ಯಕರ್ತರ ಕಡೆಯಿಂದ ಭಾರೀ ಟೀಕೆ ಕೇಳಿಸಿಕೊಂಡ ಬಳಿಕ ಒಂದು ತಿಂಗಳ ನಂತರ ಸಭೆ ನಡೆಸಿದ್ದು ಸೋಲಿನ ಬಗ್ಗೆ ಚಿಂತನೆ ನಡೆಸುವುದಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆಯೂ ಆಗಲಿದೆ ಎನ್ನಲಾಗುತ್ತಿದೆ. ಪ್ರತಿಪಕ್ಷ ನಾಯಕನ ಸ್ಥಾನ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಇನ್ನೆರಡು ದಿನದಲ್ಲಿ ನೇಮಕ ಮಾಡುವ ಸಾಧ್ಯತೆಯಿದೆ.
Karnataka BJP party is holding a series of day-long meetings on Thursday to introspect the humiliating defeat in the recently concluded Assembly polls. Being held at the party headquarters here, the meeting will deliberate on the selection of candidates for the posts of leader of the Opposition in Assembly and council besides the party President from elected MLAs and leaders, according to sources.
11-02-25 10:34 pm
HK News Desk
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm